Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗಾಂಧೀಜಿ ತತ್ವ, ಸಿದ್ಧಾಂತಗಳೇ ಕಾಂಗ್ರೆಸ್ ಆಶಯ: ಲಕ್ಷ್ಮೀ ಹೆಬ್ಬಾಳಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು

 

ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷ, ಸ್ವಾತಂತ್ರ್ಯ ಹೋರಾಟದ ರೂವಾರಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳಾಗಿವೆ. ಪುಣ್ಯದ ನೆಲ ಬೆಳಗಾವಿಯಲ್ಲಿ ನಡೆದ ಈ ಐತಿಹಾಸಿಕ ಅಧಿವೇಶನದ ಶತಮಾನೋತ್ಸವವನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಕಾಂಗ್ರೆಸ್ ಸರಕಾರ ಅತ್ಯಂತ ಶೃದ್ಧೆಯಿಂದ ಆಚರಿಸುತ್ತಿದೆ.

ಈಗಾಗಲೆ ಎಐಸಿಸಿ ಅಧಿವೇಶನ ನಡೆಸಲಾಗಿದೆ. ಕಾಂಗ್ರೆಸ್ ಬಾವಿ ಬಳಿ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಸ್ಥಾಪಿಸಲಾಗಿದೆ. ಸುವರ್ಣ ವಿಧಾನಸೌಧದ ಎದುರು ಮಂಗಳವಾರ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣಗೊಳ್ಳಲಿದೆ. ಜೊತೆಗೆ ಬೃಹತ್ ಸಮಾವೇಶವೂ ಆಯೋಜನೆಯಾಗಿದೆ. ಇದು ಮತ್ತೊಂದು ಐತಿಹಾಸಿಕ ಘಟನೆಯಾಗಬೇಕೆನ್ನುವ ಉದ್ದೇಶವನ್ನಿಟ್ಟುಕೊಂಡು ಅರ್ಥಪೂರ್ಣವಾಗಿ ಇಡೀ ಕಾರ್ಯಕ್ರಮ ನಡೆಸಲಾಗುತ್ತಿದೆ.
ಕಾಂಗ್ರೆಸ್ ಪಕ್ಷ ಹಿಂದೆ, ಇಂದು ಹಾಗೂ ಮುಂದೆ ಕೂಡ ಗಾಂಧೀಜಿಯವರ ತತ್ವ, ಸಿದ್ಧಾಂತ, ಆಶಯಗಳ ತಳಹದಿಯ ಮೇಲೆಯೇ ನಡೆಯುತ್ತಿರುವ, ನಡೆಯುವ ಪಕ್ಷ. ಸತ್ಯ, ಅಹಿಂಸೆ, ಸ್ವಾವಲಂಬನೆ, ಸರಳ ಬದುಕು ಮತ್ತು ಧಾರ್ಮಿಕ ಸಾಮರಸ್ಯ ಸೇರಿದಂತೆ ಗಾಂಧೀಜಿಯವರ ಆಶಯಗಳನ್ನು ಚಾಚೂ ತಪ್ಪದೆ ಅನುಸರಿಸುತ್ತಿರುವ ಪಕ್ಷ ಕಾಂಗ್ರೆಸ್. ಗಾಂಧೀಜಿ, ಡಾ.ಬಾಬಾಸಾಹೇಬ ಅಂಬೇಡ್ಕರ್ ಸೇರಿದಂತೆ ಮಹಾನ್ ನಾಯಕರು ಕಂಡ ಕನಸುಗಳನ್ನು ಅನುಷ್ಠಾನಗೊಳಿಸುವ ಕೆಲಸವನ್ನು ಅತ್ಯಂತ ಶೃದ್ಧೆಯಿಂದ ಕಾಂಗ್ರೆಸ್ ಸರಕಾರ ಮಾಡಿಕೊಂಡು ಬರುತ್ತಿದೆ.
ತತ್ವರಹಿತ ರಾಜಕಾರಣ, ದುಡಿಮೆಯಿಲ್ಲದ ಸಂಪತ್ತು, ಆತ್ಮಸಾಕ್ಷಿ ಇಲ್ಲದ ಸಂತೋಷ, ಚಾರಿತ್ರ್ಯವಿಲ್ಲದ ಶಿಕ್ಷಣ, ನೀತಿ ಇಲ್ಲದ ವ್ಯಾಪಾರ, ಮಾನವೀಯತೆ ಇಲ್ಲದ ಜ್ಞಾನ ಮತ್ತು ತ್ಯಾಗವಿಲ್ಲದ ಪೂಜೆ ಇವುಗಳಿಂದ ದೂರವಿರಬೇಕೆನ್ನುವುದು ಗಾಂಧೀಜಿಯವರ ಸಂದೇಶವಾಗಿದೆ. ಅಸ್ಪೃಶ್ಯತೆ, ಬಾಲ್ಯ ವಿವಾಹ ಮೊದಲಾದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಬೇಕೆನ್ನುವುದು ಅವರ ಆಶಯವಾಗಿತ್ತು. ಈ ಎಲ್ಲ ಮಾರ್ಗದಲ್ಲಿ ಕಾಂಗ್ರೆಸ್ ನಿರಂತರವಾಗಿ ಕೆಲಸ ಮಾಡುತ್ತ ಬಂದಿದೆ.

ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸ್ಥಳದಲ್ಲಿರುವ ಬಾವಿಯ ನೀರನ್ನು ತಂದು ಸಾಂಕೇತಿಕವಾಗಿ ಸ್ವಚ್ಛಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯವನ್ನು ಅಧಿಕೃತವಾಗಿ ಆರಂಭಿಸಿತು. ಅಲ್ಲಿ ಆರಂಭಿಸಿದ ಪ್ರಜಾಧ್ವನಿ ಯಾತ್ರೆಯ ಮೂಲಕ ಇಡೀ ರಾಜ್ಯದಲ್ಲಿ ಸಂಚರಿಸಿ ಜನ ಬೆಂಬಲ ಕೇಳಿತು. ಜನರು ಅಭೂತಪೂರ್ವವಾಗಿ ಬೆಂಬಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರು. ಜನರ ಆಶಯದಂತೆ ಪಕ್ಷ, ಸರಕಾರ ಮುನ್ನಡೆಯುತ್ತಿದೆ.
ಗಾಂಧೀಜಿಯವರ ತತ್ವಗಳು ಸಾರ್ವಕಾಲಿಕವಾದವು. ಅವುಗಳನ್ನು ಆಳುವವರು ಮತ್ತು ಪ್ರಜೆಗಳು ಅಳವಡಿಸಿಕೊಂಡಾಗ, ಜಾರಿಗೊಳಿಸಿದಾಗ ಗಾಂಧೀಜಿ ಕಂಡ ರಾಮರಾಜ್ಯದ ಕನಸು ನನಸಾಗಲಿದೆ. ಅಂತಹ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿಕೊಂಡು ಬರುತ್ತಿದೆ. ಗಾಂಧೀಜಿಯವರ ತತ್ವದ ಮೇಲೆಯೇ ಆಡಳಿತ ನಡೆಸುತ್ತಿದೆ. ಜಾತೀಯತೆಯನ್ನು ಹೋಗಲಾಡಿಸಲು, ಶ್ರೀಮಂತರು ಮತ್ತು ಬಡವರ ಮಧ್ಯೆ ಇರುವ ಅಂತರವನ್ನು ಕಡಿಮೆ ಮಾಡಲು, ಮಹಿಳೆಯರು ನಿರ್ಭಯದಿಂದ ಓಡಾಡುವಂತಹ ವಾತಾವರಣ ನಿರ್ಮಾಣ ಮಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.
ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲ ಮುಖಂಡರ ಮಾರ್ಗದರ್ಶನದಲ್ಲಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರ ನೇತೃತ್ವದಲ್ಲಿನ ನಮ್ಮ ಸರಕಾರಗಾಂಧಿ ಮಾರ್ಗದಲ್ಲಿ ಅಪಾರ ನಂಬಿಕೆ ಇಟ್ಟುಕೊಂಡು ಬಂದಿದೆ. ನಮ್ಮ ವಿವಿಧ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು ಮತ್ತು ಶ್ರೀಮಂತರ ಮಧ್ಯೆ ಇರುವ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ಮೂಲಕ ಅವರ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ಇದರಿಂದಾಗಿ ಇಡೀ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣುತ್ತಿದ್ದೇವೆ. ರಾಷ್ಟ್ರದ ಬೇರೆ ಬೇರೆ ರಾಜ್ಯಗಳಿಗೆ ಕೂಡ ನಮ್ಮ ಗ್ಯಾರಂಟಿ ಯೋಜನೆಗಳು ಮಾದರಿಯಾಗಿವೆ.
ಗಾಂಧೀಜಿಯವರ ತತ್ವ, ಸಂದೇಶಗಳು ಮುಂದಿನ ಪೀಳಿಗೆಗೆ ಮುಂದುವರಿಯಬೇಕೆನ್ನುವ ಸದುದ್ದೇಶದಿಂದ ಸುವರ್ಣ ವಿಧಾನಸೌಧದ ಎದುರು ಗಾಂಧಿ ಪ್ರತಿಮೆ ಸ್ಥಾಪಿಸಲಾಗಿದೆ. ವೀರಸೌಧದ ಆವರಣದಲ್ಲೂ ಈಗಾಗಲೆ ಪುತ್ಥಳಿ ಸ್ಥಾಪನೆಯಾಗಿದೆ. ಇಡೀ ರಾಷ್ಟ್ರದಲ್ಲಿ ಗಾಂಧೀ ತತ್ವ ಪ್ರಸಾರದ ಉದ್ದೇಶ ಇಟ್ಟುಕೊಂಡು ಎಐಸಿಸಿ ಅಧಿವೇಶನದ ಸ್ಮರಣಾರ್ಥ ಇಡೀ ವರ್ಷ ಗಾಂಧಿ ಭಾರತ ಕಾರ್ಯಕ್ರಮ ನಡೆಸಲು ತೀರ್ಮಾನಿಸಿ ಕಾರ್ಯೋನ್ಮುಖರಾಗಿದ್ದೇವೆ. ಯುವ ಪೀಳಿಗೆಗೆ ಗಾಂಧಿ ಸಂದೇಶ ತಲುಪಿಸದಿದ್ದರೆ, ಹಸ್ತಾಂತರಿಸದಿದ್ದರೆ ಅದೊಂದು ದೊಡ್ಡ ಅಚಾತುರ್ಯವಾಗಲಿದೆ. ಹಾಗಾಗಿ ಆ ದಿಸೆಯಲ್ಲಿ ನಮ್ಮ ಪಕ್ಷ ಮತ್ತು ಸರಕಾರ ಮುಂದಡಿ ಇಟ್ಟಿದೆ. ಇದಕ್ಕೆ ಎಲ್ಲರ ಸಹಕಾರ, ಮಾರ್ಗದರ್ಶನವನ್ನು ಎದುರು ನೋಡುತ್ತಿದ್ದೇವೆ.
ನಮ್ಮ ಬೆಳಗಾವಿಯಲ್ಲಿ ಇಂತದ್ದೊಂದು ಕಾರ್ಯಕ್ರಮ ನಡೆಯುತ್ತಿರುವುದು, ನಾವು ಇದಕ್ಕೆಲ್ಲ ಸಾಕ್ಷಿಯಾಗುತ್ತಿರುವುದು ಬಹಳ ಹೆಮ್ಮೆಯ ಸಂಗತಿಯಾಗಿದೆ. ನಮ್ಮ ನಮ್ಮ ಜೀವನದಲ್ಲಿ ಗಾಂಧೀಜಿಯವರ ತತ್ವ, ಸಂದೇಶಗಳನ್ನು ಅಳವಡಿಸಿಕೊಳ್ಳುವ ಪ್ರತಿಜ್ಞೆ ಮಾಡೋಣ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?