Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಮತ ಎಣಿಕೆ: ಕಾಂಗ್ರೆಸ್, ಬಿಜೆಪಿ ಆರಂಭಿಕ ಮುನ್ನಡೆ

ನವದೆಹಲಿ: ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಆರಂಭವಾಗಿದ್ದು, ಹರಿಯಾನದಲ್ಲಿ ಕಾಂಗ್ರೆಸ್ 62, ಬಿಜೆಪಿ 24, ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ 18, ಕಾಂಗ್ರೆಸ್ 12 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿವೆ.

ಈ ಫಲಿತಾಂಶವು ಮುಂಬರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗಳಿಗೆ ದಿಕ್ಕೂಚಿಯಾಗುವ ಸಾಧ್ಯತೆ ಇದೆ.

ಹರಿಯಾಣದಲ್ಲಿ ದಶಕದ ಬಳಿಕ ಅಧಿಕಾರದ ಗದ್ದುಗೆ ಏರುವ ಆಸೆಯಲ್ಲಿ ಕಾಂಗ್ರೆಸ್ ಪಾಳಯ ಇದೆ. ಕಮಲ ಪಾಳಯವು ಸತತ ಮೂರನೇ ಅವಧಿಗೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಸರೆನ್ಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದು, ಸರ್ಕಾರ ರಚನೆಯ ಭರವಸೆಯಲ್ಲಿವೆ. ರಾಜ್ಯದಲ್ಲಿ ದಶಕದ ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ ತನ್ನ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ. ರಾಜ್ಯದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಆದರೆ, ಕಾಂಗ್ರೆಸ್‌-ನ್ಯಾಷನಲ್ ಕಾನ್ನರೆನ್ಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.

ತಾಜಾ ಮಾಹಿತಿ ಕಮಲ ಕಿಲಕಿಲ...

ತಾಜಾ ಮಾಹಿತಿಯ ಪ್ರಕಾರ ಹರಿಯಾಣದಲ್ಲಿ ಬಿಜೆಪಿ ಇದೀಗ ಆರಂಭಿಕ ಹಿನ್ನಡೆ ನಡುವೆ ಮತ್ತೆ ಪುಟಿದೆದ್ದಿದೆ. ಬಿಜೆಪಿ 44 ಸ್ಥಾನಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಈವರೆಗೆ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಇದೇ ರೀತಿ ಮುನ್ನಡೆ ಸಾಧಿಸಿದರೆ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರಕ್ಕೆ ಏರುವ ಸಾಧ್ಯತೆ ಇದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ