Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್ ಮುಖಂಡ ಸದಾಶಿವ ದೇಶಿಂಗೆ ಬಿಜೆಪಿ ಸೇರ್ಪಡೆ 

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕಾಂಗ್ರೆಸ್‌ನ ಮುಖಂಡ ಹಾಗೂ ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಮುಖಂಡ ಸದಾಶಿವ ದೇಶಿಂಗೆ ಕಾಂಗ್ರೆಸ್ ಪಕ್ಷ ತೊರೆದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದಾರೆ.

ಬೆಂಗಳೂರು ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಕ್ಷದ ಬಾವುಟ ನೀಡಿ ಹಾಗೂ ಕಂಬಳಿ ಹೊದಿಸಿ ಸದಾಶಿವ ದೇಶಿಂಗೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಶಾಸಕರಾದ ಬೈರತಿ ಬಸವರಾಜು, ದುರ್ಯೋಧನ ಐಹೊಳೆ, ಬಸವರಾಜ ಮತ್ತಿಮಾಡು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಸದಾಶಿವ ದೇಶಿಂಗೆ ಅವರು ಕುರುಬ ಸಮಾಜದಲ್ಲಿ ಪ್ರಭಾವಿ ನಾಯಕರು ಎಂದು ಬಣ್ಣಿಸಿದರು. ರಾಯಬಾಗ ಸೇರಿದಂತೆ ಬೆಳಗಾವಿ ಭಾಗದಲ್ಲಿ ಸದಾಶಿವ ದೇಶಿಂಗೆ ಅವರಿಗೆ ಉತ್ತಮ ಜನಬೆಂಬಲವಿದೆ. ಅವರ ಬಿಜೆಪಿ ಸೇರ್ಪಡೆಯಿಂದ ಉತ್ತರ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಆನೆಬಲ ಬಂದಂತಾಗಿದೆ ಎಂದು ಹೇಳಿದರು.

ಪಿ. ರಾಜೀವ್ ಪೋಸ್ಟ್‌ನಲ್ಲಿ ಏನಿದೆ? : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಉದ್ಯಮಿ ಹಾಗೂ ಹಾಲುಮತ ಸಮಾಜದ ಯುವ ಮುಖಂಡರಾದ ಸದಾಶಿವ ದೇಶಿಂಗೆ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅವರ ಸಾಮಾಜಿಕ ಸೇವೆ, ಸಂಘಟನಾ ಸಾಮರ್ಥ್ಯ ಹಾಗೂ ಯುವಜನರಲ್ಲಿ ಹೊಂದಿರುವ ಪ್ರಭಾವ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ನೀಡಲಿದೆ ಎಂಬ ವಿಶ್ವಾಸವನ್ನು ಪಕ್ಷದ ನಾಯಕರು ವ್ಯಕ್ತಪಡಿಸಿದ್ದಾರೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ