Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಡ್ಡ ಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ : ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು : ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ ಚಲಾವಣೆ*
ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು. ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ ಇರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ. ಆದರೂ ನಿಲ್ಲಿಸಿದ್ದಾರೆ. ನಮ್ಮ ಎಲ್ಲಾ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುವುದು. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು ಮತ ಹಾಕಬೇಕಾಯಿತು. ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು. ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ ಎಂದರು.

*ಆತ್ಮ ಎಲ್ಲಿದೆ?*
ಜೆಡಿಎಸ್ ಗೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ. ಜೆಡಿ ಎಸ್ ಎಂದು ಹೆಸರಿಟ್ಟುಕೊಂಡು ಬಿಜೆಪಿ ಜೊತೆ ಸೇರಿರುವವರಿಗೆ ಆತ್ಮ ಎಲ್ಲಿದೆ? ಎಂದು ಪ್ರಶ್ನಿಸಿದರು.

*ಆಮಿಷ ಒಡ್ಡುವ ಪ್ರಮೇಯ ಇಲ್ಲ*
ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ಬರಬಹುದು ಎಂದರು. ನಮಗೆ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ನಮಗೆ 136 ಮತಗಳಿವೆ. ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದರು.

*ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ*
ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆ ಯಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿ ಅವರು ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ. ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ