Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯಸಭೆ ಚುನಾವಣೆಗೆ ದಿನ ನಿಗದಿ

 

ದೆಹಲಿ:
ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್‌ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

ಗೋವಾದಿಂದ ಒಬ್ಬರು, ಗುಜರಾತ್‌ನಿಂದ ಮೂವರು, ಪಶ್ಚಿಮ ಬಂಗಾಳದಿಂದ ಆರು ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.

ಗುಜರಾತ್‌ನಿಂದ ಆಯ್ಕೆಯಾಗಿದ್ದ ಬಿಜೆಪಿಯ ಜೈಶಂಕರ್, ದಿನೇಶ್‌ಚಂದ್ರ ಜೆಮಲ್‌ಭಾಯ್‌ ಅನವದೀಯ, ಲೋಖಂಡವಾಲಾ ಜುಗಲ್‌ ಸಿನ್ಹಾ ಮಾಥೂರ್‌ಜಿ ಹಾಗೂ ಪಶ್ಚಿಮ ಬಂಗಾಳದಿಂದ ಆಯ್ಕೆಯಾಗಿದ್ದ ತೃಣಮೂಲ ಕಾಂಗ್ರೆಸ್‌ನ ಡೆರ್ರೆಕ್‌ ಒ ಬ್ರಿಯಾನ್, ಡೊಲಾ ಸೆನ್, ಪ್ರದೀಪ್‌ ಭಟ್ಟಾಚಾರ್ಯ, ಸುಶ್ಮಿತಾ ದೇವ್, ಸುಖೇಂದು ಶೇಖರ್‌ ರೇ, ಶಾಂತಾ ಛೆಟ್ರಿ ಅವರ ಅವಧಿ ಆ.18ಕ್ಕೆ ಮುಗಿಯಲಿದೆ.

ಗೋವಾದಿಂದ ಆಯ್ಕೆಯಾಗಿರುವ ಬಿಜೆಪಿ ಎಂಪಿ ವಿನಯ್‌ ಡಿ. ತೆಂಡೂಲ್ಕರ್‌ ಅವರ ಅವಧಿಯು ಜುಲೈ 28ಕ್ಕೆ ಅಂತ್ಯವಾಗಲಿದೆ.

ಅಲ್ಲದೆ, ತೃಣಮೂಲ ಕಾಂಗ್ರೆಸ್‌ನ ಲುಜಿನ್ಹೊ ಫಲೆರೊ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಜುಲೈ 24ರಂದೇ ಉಪ ಚುನಾವಣೆ ನಡೆಯಲಿದೆ. ಅವರ ಅಧಿಕಾರವಧಿ ಏಪ್ರಿಲ್‌ 2026ರವರೆಗೂ ಇತ್ತು. ಕೆಲ ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರು.

ಈ ಸ್ಥಾನಗಳ ಭರ್ತಿಗೆ ಜುಲೈ 6ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರಗಳ ಸಲ್ಲಿಕೆಗೆ ಜುಲೈ 13 ಕಡೆಯ ದಿನವಾಗಿದ್ದು, ವಾಪಸಾತಿಗೆ ಜುಲೈ 17 ಕಡೆಯದಿನ. ಮತದಾನ ಜುಲೈ 24ರಂದು ನಡೆಯಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಭೇಟಿಯಾದ ವಿಧಾನಸಭೆ ಸ್ಪೀಕರ್ : ಬಿಜೆಪಿ ತೀವ್ರ ಆಕ್ರೋಶಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?