Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

DCC ಬ್ಯಾಂಕ್ ಚುನಾವಣೆ: ಕೊನೆಗೂ ರವಿವಾರವೇ ನಡೆಸಲು ನಿರ್ಧಾರ

ಬೆಳಗಾವಿ :

ಈ ಸಲ ನಡೆಯಲಿರುವ ಬೆಳಗಾವಿ ಜಿಲ್ಲೆಯ ಡಿಸಿಸಿ ಬ್ಯಾಂಕ್ ಚುನಾವಣೆ ಇಡೀ ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದಾರೆ. ರಾಜ್ಯದ ಪ್ರಭಾವಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಾಜಿ ಸಂಸದ ಮತ್ತು ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ್ ಕತ್ತಿ ಅವರ ಬಣಗಳ ನಡುವಿನ ಈ ಕಾದಾಟದಲ್ಲಿ ಗೆಲ್ಲುವವರು ಯಾರು ಎಂಬ ಬಗ್ಗೆ ನಾಡಿನ ಜನತೆ ಕುತೂಹಲದಿಂದ ಕಾಯುತ್ತಿದ್ದು ರವಿವಾರ ಮಹತ್ವದ ಚುನಾವಣೆಗೆ ವೇದಿಕೆ ಸಜ್ಜಾಗಿದೆ.

ಮುಂದೂಡಿಕೆ ಆಗಿದ್ದ ಚುನಾವಣೆ ಸಹ ರವಿವಾರ:

ರಾಜ್ಯದ ಗಮನ ಸೆಳೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಕ್ಟೋಬರ್ 19ರಂದು ನಡೆಯಲಿದೆ. ಆದರೆ ಶುಕ್ರವಾರದಂದು ಜಿಲ್ಲಾ ಸಹಕಾರಿ ಬ್ಯಾಂಕಿನ ಹುಕ್ಕೇರಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಸಂಬಂಧಿಸಿ ಭೀಮಸೇನ ಬಾಗಿ ಎಂಬವರು ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ ಎಂಬ ಕಾರಣಕ್ಕೆ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿ ಅಲ್ಲಿನ ಚುನಾವಣೆಯನ್ನು ಮುಂದಕ್ಕೆ ಹಾಕಿತ್ತು.

ಆದರೆ ಇದೀಗ ರವಿವಾರ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಲಾಗಿದ್ದು ರವಿವಾರ ಚುನಾವಣೆ ಎಂದಿನಂತೆ ನಿಗದಿಯಾಗಿದೆ. ಒಮ್ಮೆ ಚುನಾವಣೆ ಪ್ರಕ್ರಿಯೆ ಆರಂಭವಾದರೆ ಅದನ್ನು ರದ್ದು ಮಾಡುವಂತಿಲ್ಲ. ಈ ಬಗ್ಗೆ ಮನವರಿಕೆ ಮಾಡಿದ್ದರಿಂದ ಚುನಾವಣೆ ನಿಗದಿಯಂತೆ ನಡೆಯಲಿದೆ. ನಮ್ಮ ಮನವಿಗೆ ಸ್ಪಂದಿಸಿ ನ್ಯಾಯಾಲಯ ನಿಗದಿಯಂತೆ ಚುನಾವಣೆಗೆ ಮುಂದಾಗಿರುವುದನ್ನು ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ರಮೇಶ್ ಕತ್ತಿ ಸ್ವಾಗತಿಸಿದ್ದು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇಮ್ಮಡಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?