Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿಸಿಎಂ ಅಜಿತ್ ಪವಾರ್ ಗೆ ಧರ್ಮಪತ್ನಿಯೇ ಶಕ್ತಿ..!

 

 

ಮುಂಬೈ :
ಮಹಾರಾಷ್ಟ್ರ ನೂತನ ಉಪಮುಖ್ಯಮಂತ್ರಿ,
ಎನ್‌ಸಿಪಿಯ ಹಿರಿಯ ನಾಯಕ ಅಜಿತ್ ಪವಾರ್ ಬಂಡಾಯದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬಿರುಗಾಳಿ ಎದ್ದಿದೆ. ಭಾನುವಾರ (ಜುಲೈ 2) ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಜಿತ್‌ ಪವಾರ್‌, ಪಕ್ಷದ ಹಿತದೃಷ್ಟಿ ಹಾಗೂ ಮಹಾರಾಷ್ಟ್ರ ಜನತೆಯ ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದಿದ್ದಾರೆ. ಈ ನಡುವೆ ಸುನೀಲ್‌ ತಟ್ಕರೆಯನ್ನು ಎನ್‌ಸಿಪಿ ರಾಜ್ಯಾಧ್ಯಕ್ಷರಾಗಿ ಅಜಿತ್‌ ಪವಾರ್‌ ಬಣದ ಪ್ರಫುಲ್‌ ಪಟೇಲ್‌ ಘೋಷಣೆ ಮಾಡಿದ್ದರೆ, ಪ್ರಫುಲ್‌ ಪಟೇಲ್‌ ಹಾಗೂ ಸುನೀಲ್‌ ತಟ್ಕರೆಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿರೋದಾಗಿ ಎನ್‌ಸಿಪಿ ರಾಷ್ಟ್ರಾಧ್ಯಕ್ಷ ಶರದ್‌ ಪವಾರ್ ಹೇಳಿದ್ದಾರೆ. ಈ ನಡುವೆ ನಿರಂತರ ಪ್ರಚಾರದಲ್ಲಿರುವ ಅಜಿತ್‌ ಪವಾರ್‌ ಅವರ ಪತ್ನಿ ಸುನೇತ್ರಾ ಪವಾರ್‌ ಬಗ್ಗೆ ಜನರಲ್ಲಿ ಕುತೂಹಲ ಮೂಡಿದೆ. ಅವರು ಏನು ಮಾಡ್ತಾರೆ, ಅವರ ಆಸ್ತಿಯೆಷ್ಟು ಎನ್ನುವ ವಿವರಗಳು ಇಲ್ಲಿವೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಸುನೇತ್ರಾ ಪ್ರಸಿದ್ಧ ಶಿಕ್ಷಣ ಸಂಸ್ಥೆ ವಿದ್ಯಾ ಪ್ರತಿಷ್ಠಾನದ ಟ್ರಸ್ಟಿಯಾಗಿದ್ದು, ಇದಕ್ಕೆ ಶರದ್‌ ಪವಾರ್‌ ಅವರು ಅಧ್ಯಕ್ಷರಾಗಿದ್ದಾರೆ. ಅವರು 2011 ರಿಂದ ಫ್ರಾನ್ಸ್‌ನ ಚಿಂತಕರ ಚಾವಡಿಯಾದ ವಿಶ್ವ ವಾಣಿಜ್ಯೋದ್ಯಮ ವೇದಿಕೆಯ ಸದಸ್ಯರಾಗಿದ್ದರು. ಅವರು ತಮ್ಮ ಎನ್‌ಜಿಒ ಎನ್ವಿರಾನ್‌ಮೆಂಟಲ್ ಫೋರಮ್ ಆಫ್ ಇಂಡಿಯಾ ಮೂಲಕ ಪರಿಸರ ಜಾಗೃತಿಗಾಗಿ ಕೆಲಸ ಮಾಡುತ್ತಿದ್ದಾರೆ. ಸುನೇತ್ರಾ ಪವಾರ್ ಅವರನ್ನು ಬಹುಮುಖ ಪ್ರತಿಭೆ ಎಂದೂ ಹೇಳಲಾಗುತ್ತದೆ.

ರಾಜಕೀಯ-ಕುಟುಂಬ ಎರಡನ್ನೂ ನಿರ್ವಹಣೆ ಮಾಡುವ ಸುನೇತ್ರಾ: ರಾಜಕೀಯ ಮತ್ತು ಕೌಟುಂಬಿಕ ವ್ಯವಹಾರವನ್ನು ನಿರ್ವಹಿಸುವುದರೊಂದಿಗೆ ಪರಿಸರದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸವನ್ನೂ ಸುನೇತ್ರಾ ಮಾಡುತ್ತಾರೆ. ಅಜಿತ್ ಪವಾರ್ ಮತ್ತು ಸುನೇತ್ರಾ ಪವಾರ್ ಅವರಿಗೆ ಜೈ ಮತ್ತು ಪಾರ್ಥ್ ಎಂಬ ಇಬ್ಬರು ಮಕ್ಕಳಿದ್ದಾರೆ ಮತ್ತು ಇಬ್ಬರೂ ಪುತ್ರರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅವರು ದೇಶದಲ್ಲಿ ಪರಿಸರ ಸ್ನೇಹಿ ಗ್ರಾಮ ಪರಿಕಲ್ಪನೆಯನ್ನು ನೀಡಿದ್ದರು, ಅದರೊಂದಿಗೆವ ಬಾರಾಮತಿ ಹೈಟೆಕ್ ಟೆಕ್ಸ್‌ಟೈಲ್ ಪಾರ್ಕ್ ಲಿಮಿಟೆಡ್‌ನ ಅಧ್ಯಕ್ಷರೂ ಆಗಿದ್ದಾರೆ.

ಅಜಿತ್ ಪವಾರ್ ಆಸ್ತಿ: 2021ರ ಧನತ್ರಯೋದಶಿಯ ದಿನದಂದು ಆದಾಯ ತೆರಿಗೆ ಇಲಾಖೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ನೋಟಿಸ್ ನೀಡಿರುವುದನ್ನು ನೋಡಿದರೆ ಅಜಿತ್ ಪವಾರ್ ಮತ್ತು ಅವರ ಸಂಪತ್ತು ಎಷ್ಟಿದೆ ಎಂಬುದನ್ನು ಅಂದಾಜು ಮಾಡಬಹುದು. ಅಜಿತ್ ಪವಾರ್, ಪಾರ್ಥ್ ಪವಾರ್ ಹಾಗೂ ಜರಂದೇಶ್ವರ್ ಸಕ್ಕರೆ ಕಾರ್ಖಾನೆಗೆ ಸೇರಿದ ಆಸ್ತಿಗಳಿಗೆ ತಾತ್ಕಾಲಿಕ ಜಪ್ತಿ ಆದೇಶ ಹೊರಡಿಸಲಾಗಿದೆ.

ಇದರಲ್ಲಿ ದಕ್ಷಿಣ ದೆಹಲಿಯಲ್ಲಿರುವ ಸುಮಾರು 20 ಕೋಟಿಯ ಫ್ಲಾಟ್ ಸೇರಿದೆ. ನಿರ್ಮಲ್ ಹೌಸ್‌ನಲ್ಲಿರುವ ಪಾರ್ಥ್ ಪವಾರ್ ಕಚೇರಿಯ ವೆಚ್ಚ ಸುಮಾರು 25 ಕೋಟಿ. ಜರಂದೇಶ್ವರ ಸಕ್ಕರೆ ಕಾರ್ಖಾನೆಯು ಸುಮಾರು 600 ಕೋಟಿ ರೂ. ಇದಲ್ಲದೇ ಗೋವಾದಲ್ಲಿ 250 ಕೋಟಿ ವೆಚ್ಚದ ನಿಲಯ ಎಂಬ ರೆಸಾರ್ಟ್ ಇತ್ತು. ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಪ್ರಸ್ತಾಪ ಆದಾಯ ತೆರಿಗೆ ಇಲಾಖೆಯ ಮುಂದಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ