Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

 

ಬೆಂಗಳೂರು :
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಅವರ ಅವಧಿ ಕೇವಲ ಒಂದು ವರ್ಷ ಮಾತ್ರ ಎಂಬ ಕೇಜ್ರಿವಾಲ್ ಅವರ ಹೇಳಿಕೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;

"ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು" ಎಂದರು.

*ಲೋಕಸಭೆ ಮಾದರಿಯಲ್ಲಿ ಪರಿಷತ್ ಚುನಾವಣೆ ಎದುರಿಸುತ್ತೇವೆ:*

ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಬಗ್ಗೆ ಕೇಳಿದಾಗ, "ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲಾ ಮುಖಂಡರು ಸೇರಿ ಈ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇನ್ನು ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ" ಎಂದು ತಿಳಿಸಿದರು.

ಲೋಕಸಭೆ ಮಾದರಿಯಲ್ಲೇ ಚುನಾವಣೆ ಮಾಡುತ್ತೀರಾ ಎಂದು ಕೇಳಿದಾಗ, "ಹೌದು, ಲೋಕಸಭೆ ಚುನಾವಣೆ ಮಾದರಿಯಲ್ಲಿ ಈ ಚುನಾವಣೆ ಎದುರಿಸುತ್ತೇವೆ" ಎಂದರು.

ಪರಿಷತ್ ಚುನಾವಣೆಗೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಕೇಳಿದಾಗ, "ಅವರು ಶಾಶ್ವತವಾಗಿ ಮೈತ್ರಿ ಮಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಮೈತ್ರಿಯಾದರೂ ಮಾಡಿಕೊಳ್ಳಲಿ, ವಿಲೀನವಾದರೂ ಮಾಡಿಕೊಳ್ಳಲಿ. ಅದು ಅವರ ಪಕ್ಷಗಳ ತೀರ್ಮಾನ. ನಮಗೂ ಅದಕ್ಕೂ ಸಂಬಂಧವಿಲ್ಲ" ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ