Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾಲಿನ ದರದಲ್ಲಿ ಹೆಚ್ಚಳ: ಸಂಪುಟದಲ್ಲಿ ತೀರ್ಮಾನ; ಲೀಟರ್‌ಗೆ ₹3 ಹೆಚ್ಚಳ ಪ್ರಸ್ತಾವ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಸಲ್ಲಿಸಿದ ಹಾಲಿನ ದರ ಏರಿಕೆಯನ್ನು ಪ್ರಸ್ತಾವವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೆಎಂಎಫ್‌ನ ಅಧ್ಯಕ್ಷರು, ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಹಕಾರ ಮತ್ತು ಪಶುಸಂಗೋಪನೆ ಇಲಾಖೆಗಳ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು, ಹಾಲಿನ ದರ ಏರಿಕೆಯ ಪ್ರಸ್ತಾವದ ಕುರಿತು ಚರ್ಚೆ ನಡೆಸಿದರು.

ಬಳಿಕ ಪತ್ರಿಕಾ ಹೇಳಿಕೆಯಲ್ಲಿ ಮುಖ್ಯಮಂತ್ರಿ ಈ ವಿಷಯ ತಿಳಿಸಿದ್ದಾರೆ.

'ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ, ಲಾಭ ಮಾಡುವುದಕ್ಕಲ್ಲ. ಒಂದು ವೇಳೆ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಿದರೂ, ಆ ಲಾಭವನ್ನು ಸಂಪೂರ್ಣವಾಗಿ ರೈತರಿಗೇ ವರ್ಗಾಯಿಸಬೇಕು' ಎಂದು ತಾಕೀತು ಮಾಡಿದರು.

'ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಕಾರಣ ಹಾಲಿನ ದರ ಹೆಚ್ಚಳ ಮಾಡಿದಾಗ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು' ಎಂಬ ಒಕ್ಕೂಟಗಳ ಮನವಿಯನ್ನು ಒಪ್ಪದ ಅವರು, 'ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ. ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎನ್ನುವುದು ಸರ್ಕಾರದ ನಿಲುವು' ಎಂದರು.

ಹಾಲು ಒಕ್ಕೂಟಗಳು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆ ಪಾಲಿಸಬೇಕು. ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುತ್ತಿವೆ. ಬಳ್ಳಾರಿ ಹಾಲಿನ ಒಕ್ಕೂಟ ₹1.43 ಕೋಟಿಯಷ್ಟು ನಷ್ಟದಲ್ಲಿದೆ. ಫೆಬ್ರುವರಿ ಅಂತ್ಯಕ್ಕೆ ಒಟ್ಟು ಮೂರು ಒಕ್ಕೂಟಗಳು ನಷ್ಟದಲ್ಲಿವೆ. ಮುಂದಿನ ಮೂರು ತಿಂಗಳ ಒಳಗೆ ಆಡಳಿತಾತ್ಮಕ ವೆಚ್ಚವನ್ನು ಶೇ 2.5ಕ್ಕೆ ಇಳಿಸಬೇಕು. ಆರು ತಿಂಗಳ ಒಳಗೆ ಶೇ 2ಕ್ಕಿಂತ ಕೆಳಗೆ
ಇಳಿಸಬೇಕು ಎಂದು ಸೂಚಿಸಿದರು.

ಪ್ರತಿ ಲೀಟರ್‌ಗೆ ₹3 ಹೆಚ್ಚಳಕ್ಕೆ ಪ್ರಸ್ತಾವ

ಪ್ರತಿ ಲೀಟ‌ರ್ ಹಾಲು ಮತ್ತು ಮೊಸರಿನ ದರದಲ್ಲಿ ₹3ರಷ್ಟು ಹೆಚ್ಚಳ ಮಾಡಲು ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿಯವರಿಗೆ ಕೆಎಂಎಫ್ ಪ್ರಸ್ತಾವ ಸಲ್ಲಿಸಿದೆ. ರೈತ ಸಂಘಟನೆಗಳ ಬೇಡಿಕೆಯಂತೆ ಹಾಲು ಉತ್ಪಾದಕರಿಗೆ ನೀಡುವ ದರವನ್ನು ಹೆಚ್ಚಿಸುವುದಕ್ಕಾಗಿ ಈ ಬೇಡಿಕೆ ಮಂಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?