Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

ಕೊಲ್ಲೂರು : "ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯದ ಉಪಚುನಾವಣೆ ಫಲಿತಾಂಶ ಏನಾಗಲಿದೆ ಎಂದು ಕೇಳಿದಾಗ, "ಎಲ್ಲಾ ಕಡೆಯೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎನ್ನುವ ಭರವಸೆಯನ್ನು ಇಟ್ಟಿದ್ದೇವೆ" ಎಂದು ಹೇಳಿದರು.

ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೇ ಎನ್ನುವ ಸಮೀಕ್ಷೆಗಳ ಬಗ್ಗೆ ಕೇಳಿದಾಗ, "ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು? ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ. ಸಮೀಕ್ಷೆಗಳನ್ನು ಕಟ್ಟಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಯಾರು ಜನರ ಹೃದಯ ಹಾಗೂ ವಿಶ್ವಾಸ ಪಡೆದಿರುತ್ತಾರೋ ಅವರಿಗೆ ಜನ ಗೌಪ್ಯ ಮತದಾನದ ಮೂಲಕ ಬೆಂಬಲ ನೀಡುತ್ತಾರೆ" ಎಂದರು.

ಕೊಲ್ಲೂರು ದೇವಸ್ಥಾನ ಆಡಳಿತ ಮಂಡಳಿಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಮಣೆ ಹಾಕದೆ ವಲಸಿಗರಿಗೆ ಮಣೆ ಹಾಕಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ "ಚುನಾವಣೆ ವೇಳೆ ಇಲ್ಲಿಗೆ ಬಂದಾಗ ಈ ಬಗ್ಗೆ ಕೆಲವರಿಗೆ ಮಾತು ಕೊಟ್ಟಿದ್ದೆವು. ಸ್ವಲ್ಪ ದಿನ ಅವರು ಆಡಳಿತ ಮಾಡಲಿ ಬಿಡಿ" ಎಂದು ಹೇಳಿದರು.

*ಬಿಪಿಎಲ್ ಕಾರ್ಡ್; ಬಡವರಿಗೆ ಅನ್ಯಾಯವಾಗಲು ಬಿಡುವುದಿಲ್ಲ

ಬಿಪಿಎಲ್ ಕಾರ್ಡ್ ಗೊಂದಲದ ಬಗ್ಗೆ ಕೇಳಿದಾಗ, "ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರ ಕಾರ್ಡ್ ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ ಒಬ್ಬ ಬಡವನಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ, ಪಕ್ಷದ ಅಧ್ಯಕ್ಷನಾಗಿ ನಾನು ಭರವಸೆ ನೀಡುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಸುಮ್ಮನೆ ಮಾತನಾಡುತ್ತಿವೆ" ಎಂದರು.

ರಾಜ್ಯದಲ್ಲಿ ನಕ್ಸಲ್ ಎನ್ ಕೌಂಟರ್ ನಡೆದಿದೆ. ಮಿಕ್ಕ ನಕ್ಸಲರಿಗೆ ಶರಣಾಗತಿಯಾಗಲು ಸೂಚನೆ ನೀಡಲಾಗಿದೆಯೇ ಎಂದು ಕೇಳಿದಾಗ, "ಪೊಲೀಸ್ ಇಲಾಖೆ ಹಾಗೂ ಗೃಹ ಸಚಿವರಿಗೆ ಸಂಬಂಧಪಟ್ಟ ವಿಚಾರವಾಗಿರುವ ಕಾರಣ ಅವರು ಇದರ ಬಗ್ಗೆ ಕೆಲಸ ಮಾಡುತ್ತಾರೆ. ನಾನು ನನಗೆ ಸಂಬಂಧ ಪಟ್ಟ ವಿಚಾರದಲ್ಲಿ ಕೆಲಸ ಮಾಡುತ್ತೇನೆ" ಎಂದು ಹೇಳಿದರು.

*ನಬಾರ್ಡ್ ಸಾಲ ಕಡಿತ; ಕೇಂದ್ರಕ್ಕೆ ಮನವಿ

ಕೇಂದ್ರ ಸರ್ಕಾರದ ನಬಾರ್ಡ್ ಸಂಸ್ಥೆ ಸಾಲ ಕಡಿತ ಮಾಡಿರುವ ವಿಚಾರದ ಬಗ್ಗೆ ಕೇಳಿದಾಗ, "ಈ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ನಬಾರ್ಡ್ ಸಾಲ ಕಡಿತ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ಮನವಿ ಸಲ್ಲಿಸಿದ್ದಾರೆ" ಎಂದರು.

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, "ಗ್ಯಾರಂಟಿಗಳು ಮುಂದಿನ ಮೂರುವರೆ ವರ್ಷಗಳು ಇರುತ್ತವೆ. ನಂತರವೂ ನಾವೇ ಅಧಿಕಾರಕ್ಕೆ ಬಂದು ಐದು ವರ್ಷಗಳು ಮುಂದುವರೆಸುತ್ತೇವೆ" ಎಂದರು.

"ತಾಯಿ ಕೊಲ್ಲೂರು ಮೂಕಾಂಬಿಕಾ ದೇವಿ ನಮಗೆ ಆಶೀರ್ವಾದ ಮಾಡಿದ ಪರಿಣಾಮ ರಾಜ್ಯದ ಜನರಿಗೆ ನಿರ್ವಿಘ್ನವಾಗಿ ಗ್ಯಾರಂಟಿಗಳನ್ನು ತಲುಪಿಸುತ್ತಿದ್ದೇವೆ. ತಾಯಿ ಸುಖ ಸಮೃದ್ಧಿಯನ್ನು ನಮ್ಮ ಪ್ರಜೆಗಳಿಗೆ ನೀಡಲಿ ಎಂದು ಕುಟುಂಬ ಸಮೇತನಾಗಿ ಪ್ರಾರ್ಥಿಸಿದ್ದೇನೆ " ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ