Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಕ್ಕಳ ದಿನಾಚರಣೆ: ಮಕ್ಕಳೊಂದಿಗೆ ಉಪಮುಖ್ಯಮಂತ್ರಿಗಳ ಸಂವಾದ!

ಬೆಂಗಳೂರು : ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನ.14ರಂದು ಆಯೋಜಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನವೆಂಬರ್ 14 ರಂದು ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334, ಸಮ್ಮೇಳನ ಸಭಾಂಗಣದಲ್ಲಿ ಈ ಸಂವಾದ ಏರ್ಪಡಿಸಲಾಗಿದೆ.

ಈ ಸಂವಾದದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಕ್ಕಳ ದಿನಾಚರಣೆಯಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಸ್ಮರಿಸುವುದರ ಜೊತೆಗೆ, ಭವಿಷ್ಯದ ಕರ್ನಾಟಕದ ನಿರ್ಮಾಣಕ್ಕೆ ಮಕ್ಕಳಿಂದ ಸಲಹೆಗಳನ್ನು ಪಡೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಸರ್ಕಾರಿ ಶಾಲೆಗಳ ಮಕ್ಕಳನ್ನು ಈ ಸಂವಾದಕ್ಕೆ ಆಹ್ವಾನಿಸಲಾಗಿದೆ. ಭವಿಷ್ಯದ ಪ್ರಜೆಗಳಾದ ಇಂದಿನ ಮಕ್ಕಳೊಂದಿಗೆ ಭವಿಷ್ಯದ ಕರ್ನಾಟಕಕ್ಕಾಗಿ ಸಂವಾದ ನಡೆಸಿ, ಅವರಿಂದ ಬರುವ ಅಮೂಲ್ಯ ಸಲಹೆಗಳನ್ನು ಮುಂದಿನ ದಿನಗಳಲ್ಲಿ ಸರ್ಕಾರ ರೂಪಿಸುವ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದೊಂದಿಗೆ ಈ ಸಂವಾದ ಏರ್ಪಡಿಸಲಾಗಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?