Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೇವೇಂದ್ರ ಹೆಸರಿಗೆ ಇಂದೇ ಕೊನೆಗೂ ಅಂಕಿತ ?

ಮುಂಬಯಿ: ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸೋಮವಾರ (ಡಿಸೆಂಬರ್‌ 2) ನಡೆಯಲಿದ್ದು, ಸರಕಾರ ರಚನೆ ಗೊಂದಲಗಳಿಗೆ ತೆರೆ ಬೀಳಲಿದೆ.ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಹಂಗಾಮಿ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ ಶಿಂಧೆ, ''ಬಿಜೆಪಿ ಸೂಚಿಸಿದ ವ್ಯಕ್ತಿ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಲಿದ್ದಾರೆ. ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಬಿಜೆಪಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನನ್ನ ಸಹಮತವಿದೆ.

ಸಿಎಂ ಸ್ಥಾನದ ವಿಚಾರವಾಗಿ ಮೈತ್ರಿಯಲ್ಲಿ ಯಾವುದೇ ಭಿನ್ನಮತ ಇಲ್ಲ,'' ಎಂದು ಸ್ಪಷ್ಟಪಡಿಸಿದರು.
ಸತಾರಾ ಜಿಲ್ಲೆಯ ಸ್ವಗ್ರಾಮ ಡಾರೆಯಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಶಿಂಧೆ, ''ಹೊಸ ಸರಕಾರ ರಚನೆ ಪ್ರಸ್ತಾಪಗಳು ನಡೆಯುತ್ತಿವೆ. ಮೂರು ಪಕ್ಷಗಳು ಒಗ್ಗಟ್ಟಾಗಿ ಹೊಸ ಸರಕಾರ, ಮಂತ್ರಿ ಮಂಡಲ ರಚನೆ ಮಾಡಲಿವೆ,'' ಎಂದು ಶಿಂಧೆ ಹೇಳಿದರು. ಯಾವುದೇ ಅಸಮಾಧಾನವಿಲ್ಲ. ಮುಖ್ಯಮಂತ್ರಿ ವಿಷಯವಾಗಿ ಶಿಂಧೆ ಅಸಮಾಧಾನಗೊಂಡಿದ್ದಾರೆ. ಅಧಿಕಾರ ಹಂಚಿಕೆಗೆ ಒತ್ತಡ ತಂತ್ರ ಅನುಸರಿಸುತ್ತಾರೆ ಎಂಬ ಮಾತು ಅಲ್ಲಗಳೆದ ಏಕನಾಥ್‌ ಶಿಂಧೆ, ''ನಮ್ಮ ಊರಿಗೆ ಆಗಾಗ್ಗೆ ಭೇಟಿ ನೀಡುತ್ತಿರುವೆ.
ಇದರಲ್ಲಿ ವಿಶೇಷವೇನಿಲ್ಲ. ಸಿಎಂ ಆಯ್ಕೆ ವಿಷಯದಲ್ಲಿ ನನ್ನ ನಿಲುವು ಸ್ಪಷ್ಟಪಡಿಸಿದ ಬಳಿಕವೂ ಗೊಂದಲ ಸೃಷ್ಟಿಸುವುದು ಏಕೆ,'' ಎಂದು ಪ್ರಶ್ನಿಸಿದರು.''ಸೋಮವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಬಳಿಕ ಮಹಾಯುತಿ ನಾಯಕನನ್ನು ಮೂರು ಪಕ್ಷಗಳ ಶಾಸಕರು ಆಯ್ಕೆ ಮಾಡುವರು. ಒಗ್ಗೂಡಿ ಸರಕಾರ ರಚನೆಗೆ ಹಕ್ಕು ಮಂಡಿಸಲಾಗುವುದು. ಮಹಾಯುತಿಗೆ ಚಾರಿತ್ರಿಕ ಜನಾದೇಶ ನೀಡಿರುವ ಜನರ ಆಶೋತ್ತರ ಈಡೇರಿಸಲು ಮೈತ್ರಿಕೂಟ ಕೆಲಸ ಮಾಡಲಿದೆ,'' ಎಂದು ಶಿಂಧೆ ಹೇಳಿದರು.

ಶಿಂಧೆ ಬಣದ ಡಿಸಿಎಂ ಯಾರು?
ನೂತನ ಸರಕಾರದಲ್ಲಿ ಶಿಂಧೆ ಬಣದಿಂದ ಡಿಸಿಎಂ ಹುದ್ದೆಗೆ ಯಾರು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.
ಉನ್ನತ ಮೂಲಗಳ ಪ್ರಕಾರ ಏಕನಾಥ್‌ ಶಿಂಧೆ ಪುತ್ರ ಶ್ರೀಕಾಂತ್‌ ಶಿಂಧೆ ಹೆಸರು ಕೇಳಿ ಬಂದಿದೆ.''ಪುತ್ರನನ್ನು ಡಿಸಿಎಂ ಮಾಡುವ ವಿಯಷವಾಗಿ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಮೈತ್ರಿ ನಾಯಕರ ಜತೆ ನಡೆಯುವ ಸಭೆಯಲ್ಲಿ ತೀರ್ಮಾನಿಸಲಾಗುವುದು. ಯಾರಿಗೆ ಯಾವ ಸ್ಥಾನ ಕೊಡಬೇಕು, ಯಾವ ಪಕ್ಷಕ್ಕೆ ಎಷ್ಟು ಮಂತ್ರಿ ಸ್ಥಾನ ನೀಡಬೇಕು ಎಂಬುದು ಮೈತ್ರಿ ಸಭೆಯಲ್ಲಿ ನಿರ್ಧಾರವಾಗಲಿದೆ,'' ಎಂದು ಶಿಂಧೆ ಹೇಳಿದ್ದಾರೆ. ರಾಜ್ಯದಲ್ಲಿ ಅರಾಜಕತೆಚುನಾವಣೆ ಫಲಿತಾಂಶ ಪ್ರಕಟವಾಗಿ ಒಂದು ವಾರ ಕಳೆದರೂ ಮುಖ್ಯಮಂತ್ರಿ ಅಯ್ಕೆ ಮಾಡಲು ಅಸಮರ್ಥವಾಗಿರುವ ಮಹಾಯುತಿ ಮೈತ್ರಿ, ಮತದಾರರು ನೀಡಿದ ಜನಾದೇಶಕ್ಕೆ ಅವಮಾನ ಮಾಡಿದೆ ಎಂದು ಪ್ರತಿಪಕ್ಷಗಳು ಟೀಕಿಸಿವೆ.
"ಸರಕಾರ ರಚನೆಗೆ ಹಕ್ಕು ಮಂಡಿಸುವ ಮುನ್ನವೇ ಪ್ರಮಾಣ ವಚನ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಿರುವ ಮೈತ್ರಿ ನಾಯಕರ ನಿರ್ಧಾರ ರಾಜ್ಯದಲ್ಲಿ ಅರಾಜಕ ಆಡಳಿತದ ಸಂಕತೇವಾಗಿದೆ,'' ಎಂದು ವಾಗ್ದಾಳಿ ನಡೆಸಿರುವ ಶಿವಸೇನೆ (ಉದ್ಧವ್‌ ಬಣ) ಶಾಸಕ ಆದಿತ್ಯಾ ಠಾಕ್ರೆ, ''ಒಂದು ವೇಳೆ ಮಹಾವಿಕಾಸ್‌ ಅಘಾಡಿ ಬಹುಮತ ಪಡೆದು, ಸರಕಾರ ರಚನೆಗೆ ವಿಳಂಬ ಮಾಡಿದ್ದಲ್ಲಿ ಇಷ್ಟೊತ್ತಿಗೆ ರಾಷ್ಟ್ರಪತಿ ಆಡಳಿತ ಜಾರಿಯಾಗಿರುತ್ತಿತ್ತು,'' ಎಂದು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ