Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಧಾರವಾಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಅತ್ಯಂತ ದಕ್ಷ-ಕ್ರಿಯಾಶೀಲ ಅಧಿಕಾರಿಯನ್ನು ನೇಮಕ ಮಾಡಿ ಸರ್ಕಾರ

ಬೆಳಗಾವಿ/ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರನ್ನು ಧಾರವಾಡ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಕೆಲ ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಎಸಿ, ಮಹಾನಗರ ಪಾಲಿಕೆ ಆಯುಕ್ತರಾಗಿ ಅವರು ಅತ್ಯಂತ ಪ್ರಾಮಾಣಿಕ ರೀತಿಯಲ್ಲಿ ಕೆಲಸ ಮಾಡಿ ಜನಮನ ವಿಶ್ವಾಸ ಸಂಪಾದಿಸಿದ್ದರು. ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲವೇ ಕೆಲವು ಕ್ರಿಯಾಶೀಲ ಅಧಿಕಾರಿಗಳಲ್ಲಿ ರುದ್ರೇಶ ಘಾಳಿಯವರು ಒಬ್ಬರು ಎನ್ನುವುದು ಗಮನಿಸಬೇಕಾದ ಸಂಗತಿ. ಅತ್ಯಂತ ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿ ಎಂದೇ ಅವರು ಸೇವಾವಧಿಯುದ್ದಕ್ಕೂ ಜನರ ಮನಸ್ಸಿನಲ್ಲಿ ಖ್ಯಾತಿ ಪಡೆದುಕೊಂಡಿದ್ದಾರೆ.

ರುದ್ರೇಶ ಘಾಳಿ ಅವರು ಪ್ರಸಕ್ತ ವರ್ಷ ಜನವರಿ 27 ರಂದು ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಅರು ತಿಂಗಳ ಅವಧಿಯಲ್ಲಿ ಅವರ ಸೇವಾ ಕಾರ್ಯಗಳು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನಪ್ರಿಯತೆಯ ತುತ್ತ ತುದಿಗೆ ತಲುಪಿದ್ದಲ್ಲದೆ ಒಟ್ಟಾರೆ ಇಡೀ ಮಹಾನಗರ ಪಾಲಿಕೆ ಅಭಿವೃದ್ಧಿ ಪತದತ್ತ ಸಾಗಲು ಕಾರಣವಾಗಿತ್ತು. ಸಾಕಷ್ಟು ಸುಧಾರಣಾ ಕಾರ್ಯಕ್ರಮಗಳನ್ನು ತರುವ ಮೂಲಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಶ್ರೇಯೋಭಿವೃದ್ಧಿಗೆ ಅವರು ಕಾರಣಿಕರ್ತರಾಗಿದ್ದರು. ಅಲ್ಲದೆ, ಹುಬ್ಬಳ್ಳಿ–ಧಾರವಾಡ ಸ್ಮಾರ್ಟ್ ಸಿಟಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಅದಕ್ಕೂ ಮೊದಲು ಅವರು ಬೆಳಗಾವಿ ಮಹಾನಗರ ಪಾಲಿಕೆ ಮತ್ತು ಬೆಳಗಾವಿ ಎಸಿ ಆಗಿ ಅವರು ದಕ್ಷ ಸೇವೆ ಸಲ್ಲಿಸಿದ್ದರು. ತಾರುಣ್ಯದಲ್ಲಿ ಎರಡನೇ ರಾಜಧಾನಿಯಾದ ಬೆಳಗಾವಿಯಲ್ಲಿ ಸೇವೆ ಸಲ್ಲಿಸಿ ಬಹು ಮುಖ್ಯ ಹೊಣೆಗಾರಿಕೆಯನ್ನು ಅವರು ನಿಭಾಯಿಸಿದ್ದರು.

ಬೆಳಗಾವಿ ಮತ್ತು ಹುಬ್ಬಳ್ಳಿ- ಧಾರವಾಡ ಭಾಗದಲ್ಲಿ ಶ್ರೇಷ್ಠ ಅಧಿಕಾರಿಯಾಗಿ ಹೆಸರುವಾಸಿಯಾಗಿರುವ ರುದ್ರೇಶ ಘಾಳಿ ಅವರು ಜನರ ಜೊತೆ ನಿಘಟವಾಗಿ ಬೆರೆಯುವ ಜೊತೆಗೆ ಅವರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸುವವರಾಗಿದ್ದಾರೆ. ಜೊತೆಗೆ ಯಾವುದೇ ಸಮಸ್ಯೆ ಇರಲಿ, ಅವುಗಳಿಗೆ ತಾರ್ಕಿಕ ಪರಿಹಾರ ಒದಗಿಸುವವರೆಗೆ ಅದರ ಬೆನ್ನು ಬಿಡುವುದಿಲ್ಲ. ಅಷ್ಟರ ಮಟ್ಟಿಗೆ ಅವರ ಕೆಲಸ ಕಾರ್ಯಗಳು ಜನರಿಗೆ ಆಪ್ತವಾಗಿವೆ.

ಧಾರವಾಡ ಜಿಲ್ಲಾ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ ಜಯಶ್ರೀ ಶಿಂತ್ರಿ ಅವರನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡಲಾಗಿದೆ.

ರುದ್ರೇಶ ಘಾಳಿ ಅವರಿಂದ ತೆರವಾದ ಪಾಲಿಕೆಯ ಆಯುಕ್ತ ಸ್ಥಾನಕ್ಕೆ ಯಾರನ್ನೂ ನೇಮಕ ಮಾಡಿಲ್ಲ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?