Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ, ಮುಂಜಾನೆ 11 ಗಂಟೆಗೆ ಅಂತಿಮ ಕ್ರೀಯೆ

ಬೈಲಹೊಂಗಲ- ನ. 13 ರಂದು ಯಮಸಲ್ಲೇಖನ ವೃತ ಸ್ವೀಕರಿಸಿದ್ದ ಶ್ರೀ 108 ಜ್ಞಾನೇಶ್ವರ ಮುನಿ ಮಹಾರಾಜರು ತಮ್ಮ 86 ನೇ ವಯಸ್ಸಿನಲ್ಲಿ ಎಂಟು ದಿನಗಳ ನಂತರ ನ.20 ರಂದು ಸಂಜೆ 5 ದೇವಲಾಪೂರ ಕ್ಷೇತ್ರದಲ್ಲಿ ಸಮಾಧಿ ಮರಣ ಹೊಂದಿದರು.

ಇವರ ಅಂತಿಮ ದಹನಕ್ರೀಯಾದಿ ವಿಧಿ ವಿಧಾನಗಳು  (ನ.21) ಮುಂಜಾನೆ 11 ಗಂಟೆಗೆ ದೇವಲಾಪೂರ ಗ್ರಾಮದ ಅಷ್ಟಮ ನಂದೀಶ್ವರ ಕ್ಷೇತ್ರದಲ್ಲಿ ಜರುಗಲಿದೆ. ಅಪಾರ ಭಕ್ತ ಸಮೂಹ ಹೊಂದಿದ್ದ ಮುನಿಗಳು ದೇವಲಾಪೂರ ಗ್ರಾಮದಲ್ಲಿ ಅಷ್ಟಮ ನಂದೀಶ ಕ್ಷೇತ್ರದ ಸಂಸ್ಥಾಪಕರಾಗಿದ್ದರು. ಜ್ಞಾನತೀರ್ಥ ವಿದ್ಯಾಪೀಠ ಶಿಕ್ಷಣ ಸ್ಥಾಪಿಸಿದ್ದಾರೆ. 300 ಕ್ಕೂ ಹೆಚ್ಚು ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಸಂಸ್ಥೆಯಲ್ಲಿ ಲೌಕೀಕ ಶಿಕ್ಷಣದೊಂದಿಗೆ ಧಾರ್ಮಿಕ, ಮೌಲ್ಯ ಶಿಕ್ಷಣ ನಡೆದಿದೆ. ಕುಲಭೂಷಣ ಅಲ್ಪಸಂಖ್ಯಾತರ ಕ್ರೆಡಿಟ್ ಸೊಸೈಟಿ ಸ್ಥಾಪಿಸಿ ಗ್ರಾಮೀಣ ಜನರ ಆರ್ಥಿಕತೆಗೆ ಅನುಕೂಲತೆ ಮಾಡಿದ್ದರು. ಧಾರವಾಡ, ಬೆಳಗಾವಿ ಜಿಲ್ಲೆಯ ನೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ಜೀನ ಮಂದಿರಗಳನ್ನು ಕಟ್ಟಿಸಿ ಜನರ ಕಲ್ಯಾಣಕ್ಕೆ ನೆರವಾಗಿದ್ದರು. ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಜಯಕೀರ್ತಿ ವಿದ್ಯಾಪೀಠ, ಸಹಕಾರಿ ಸಂಘ, ಜೀನ ಮಂದಿರಗಳನ್ನು ನಿರ್ಮಿಸಿದ್ದಾರೆ. ಪೂಜ್ಯರು 108 ಸಮೇದ ಶಿಖರಜಿಯ ಯಾತ್ರೆ, 5 ಬಾರಿ ಸಂಘದೊಂದಿಗೆ ಪಾದಯಾತ್ರೆ ಕೂಡಾ ಮಾಡಿದ್ದಾರೆ.

ಮುನಿಗಳು ಗರಗ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿ ಸ್ವ ಸಾಧನೆಯಿಂದ ತಹಶೀಲ್ದಾರ ಹುದ್ದೆಯ ಮೂಲಕ ಜನಸೇವೆ ಮಾಡಿ ನಂತರ ನಿವೃತ್ತಿ ನಂತರ ಮುನಿ ಧೀಕ್ಷೆ ಪಡೆದು ಲೋಕ ಕಲ್ಯಾಣಕ್ಕಾಗಿ, ಧರ್ಮ ಜಾಗೃತಿಗಾಗಿ ತಮ್ಮ ಜೀವನವನ್ನೆ ಮುಡುಪಾಗಿಟ್ಟು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಅಪಾರ ಭಕ್ತ ಸಮೂಹ ಮರಣ ಮಹೋತ್ಸವ ಆಚರಣೆಯಲ್ಲಿ ತೊಡಗಿದೆ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ