Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿಯವರೇ ಸಿಎಂ ಆಗಲಿ ಎಂದವರು ಯಾರು ಗೊತ್ತೇ ?

ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಇದೀಗ ತನ್ನ ಪಕ್ಷದವರನ್ನೇ ಮುಖ್ಯಮಂತ್ರಿ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಒಂದು ವೇಳೆ ಬಿಜೆಪಿಯಿಂದ ಮುಖ್ಯಮಂತ್ರಿ ಆಗುವುದಾದರೆ ಆ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿಯ ಆಗಿರುವ ಹಾಲಿ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವಿಸ್ ಮತ್ತೆ ಮುಖ್ಯಮಂತ್ರಿಯಾಗಬಹುದು.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೇತೃತ್ವದಲ್ಲಿ ಎನ್ ಡಿಎ ಮೈತ್ರಿಕೂಟ ಗೆಲುವು ಸಾಧಿಸಿರುವುದರಿಂದ ತಮ್ಮನ್ನೇ ಇನ್ನೊಂದು ಅವಧಿಗೆ ಮುಖ್ಯಮಂತ್ರಿ ಮಾಡುವಂತೆ ಹಾಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಒತ್ತಾಯಿಸುವ ಸಾಧ್ಯತೆ ಇದ್ದು ಅವರ ಪಕ್ಷವೂ ಸಹ ಇದನ್ನೇ ಪ್ರತಿಪಾದಿಸುತ್ತಿದೆ. ಅವರು ಸಹ ಮುಖ್ಯಮಂತ್ರಿಯಾಗುವ ರೇಸ್ ನಲ್ಲಿ ಇದ್ದಾರೆ. ಒಂದು ವೇಳೆ ಶಿಂಧೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸದೆ ಹೋದಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದಲ್ಲಿ ಬಹುದೊಡ್ಡ ಖಾತೆ ಅವರಿಗೆ ಲಭಿಸಿ ಅವರು ಕೇಂದ್ರ ಸಚಿವರಾಗುವ ಸಾಧ್ಯತೆ ಯನ್ನು ಅಲ್ಲಗಳೆಯುವಂತಿಲ್ಲ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಂದೇ 132 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುದೊಡ್ಡ ಸಾಧನೆ ಮಾಡಿದೆ. ಕೇವಲ 54 ವಯಸ್ಸಿನ ದೇವೇಂದ್ರ ಫಡ್ನವಿಸ್ ಈ ಹಿಂದೆ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸದ್ಯದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಈ ಬಾರಿ ಬಿಜೆಪಿಯಿಂದ ದೇವೇಂದ್ರ ಪಡ್ನವಿಸ್ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದರಲ್ಲಿ ಯಾವ ಸಂದೇಹವೂ ಇಲ್ಲ. ಅಷ್ಟೊಂದು ಪರಿಣಾಮಕಾರಿಯಾದ ರೀತಿಯಲ್ಲಿ ಮಹಾರಾಷ್ಟ್ರ ರಾಜಕಾರಣದಲ್ಲಿ ಇದೀಗ ದೇವೇಂದ್ರ ಫಡ್ನವಿಸ್ ಅವರ ಹೆಸರು ಮುಂಚೂಣಿಯಲ್ಲಿ ತೇಲಿ ಬರುತ್ತಿದೆ.

ಬಿಜೆಪಿಯವರೇ ಸಿಎಂ ಆಗಬೇಕು:
ಮಹಾರಾಷ್ಟ್ರದಲ್ಲಿ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಪಕ್ಷದವರನ್ನೇ ಆಯ್ಕೆ ಮಾಡುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖಂಡರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.

ದೇಶದ ಶ್ರೀಮಂತ ರಾಜ್ಯ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ 'ಮಹಾಯುತಿ' ಮೈತ್ರಿಕೂಟ ಮೂರನೇ ಎರಡರಷ್ಟು ಸ್ಥಾನಗಳನ್ನು ಗಳಿಸಿ ಪ್ರಚಂಡ ದಿಗ್ವಿಜಯ ಸಾಧಿಸಿದೆ. ಇದರ ಬೆನ್ನಲ್ಲೇ ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು ಈ ಬಾರಿ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿ ಹಾಗೂ ಅದಕ್ಕೂ ಮೊದಲು ವಿರೋಧ ಪಕ್ಷದ ನಾಯಕರಾಗಿ ಅನುಭವ ಉಳ್ಳವರಾಗಿದ್ದಾರೆ.

ಸದ್ಯ ಮುಖ್ಯಮಂತ್ರಿ ಆಗಿರುವ ಏಕನಾಥ ಶಿಂಧೆ ಅಲ್ಲದೆ, ಉಪ ಮುಖ್ಯಮಂತ್ರಿಯಾಗಿರುವ ಎನ್‌ಸಿಪಿಯ ಅಜಿತ್ ಪವಾರ್‌ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಈ ಬಾರಿಯೂ ಒಬ್ಬರು ಮುಖ್ಯಮಂತ್ರಿ, ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಬಹುದು ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ 'ಮಹಾಯುತಿ' ಮೈತ್ರಿಕೂಟ 235 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇತ್ತ ಮಹಾವಿಕಾಸ ಆಘಾಡಿ (ಎಂವಿಎ) ಮೈತ್ರಿಕೂಟವು 49 ಕ್ಷೇತ್ರ ಹಾಗೂ ಪಕ್ಷೇತರರು 4 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ-ಅಜಿತ್) ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದೆ.

ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಸಂಸದ ಸುನೀತ್‌ ತಟ್ಕರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಜಿತ ಪವಾ‌ರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮತ್ತು ಅವರ ಸಹೋದ್ಯೋಗಿ ಅನಿಲ್ ಪಾಟೀಲ ಅವರನ್ನು ಮುಖ್ಯ ಸಚೇತಕರನ್ನಾಗಿ ಮರು ನೇಮಕ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ