Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೃಹ ಬಳಕೆ ಎಲ್‌ಪಿಜಿ ದರ 60 ರೂ. ತುಟ್ಟಿ

ನವದೆಹಲಿ: ಪಶ್ಚಿಮ ಏಷ್ಯಾದ ಸಂಘರ್ಷದಿಂದಾಗಿ ತೈಲ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದ ನೇರ ಪರಿಣಾಮ ಗ್ರಾಹಕರ ಮೇಲೆ ತಟ್ಟಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡ‌ರ್ ದರ ರೂ. 60 ಹಾಗೂ ವಾಣಿಜ್ಯ ಬಳಕೆಯ ಸಿಲಿಂಡ‌ರ್ ದರ ರೂ. 114.5 ಏರಿಸಲಾಗಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ವೆಬ್‌ಸೈಟ್‌ ಪ್ರಕಾರ, ದರ ಏರಿಕೆಯೊಂದಿಗೆ ಸಬ್ಸಿಡಿಯೇತರ 14.2 ಕೆ.ಜಿ ಗೃಹ ಬಳಕೆಯ ಸಿಲಿಂಡ‌ರ್ ದರ ದೆಹಲಿಯಲ್ಲಿ ರೂ.913 ಗೆ ತಲುಪಿದೆ. ಈ ಹಿಂದೆ ರೂ. 853 ಇತ್ತು.

ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಎಲ್‌ಪಿಜಿ ದರ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಲ್ಬಣಗೊಂಡಿರುವ ಜಾಗತಿಕ ತೈಲ ಬಿಕ್ಕಟ್ಟಿನ ಪರಿಣಾಮವೇ ಬೆಲೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಈ ಏರಿಕೆಯ ಹೊರೆತಾಗಿಯೂ, ನೆರೆಯ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿಯೇ ಎಲ್‌ಪಿಜಿ ದರ ಕಡಿಮೆ ಇದೆ.

ಇಂದಿನಿಂದಲೇ (ಮಾ.7) ಪರಿಷ್ಕೃತ ದರ ಜಾರಿಗೆ ಬರಲಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ರೂ. 50 ಏರಿಕೆ ಮಾಡಲಾಗಿತ್ತು.

ಉಜ್ವಲಾ ಯೋಜನೆಯ ಫಲಾನುಭವಿಗಳು 14.5 ಕೆ.ಜಿಯ ಸಿಲಿಂಡರ್‌ಗೆ ರೂ.300 ಸಬ್ಸಿಡಿ ಪಡೆಯಲಿದ್ದಾರೆ. ಇದು ವರ್ಷಕ್ಕೆ 12 ಸಿಲಿಂಡರ್‌ಗೆ ಮಾತ್ರ ಸೀಮಿತ.

19 ಕೆ.ಜಿ.ಯ ವಾಣಿಜ್ಯ ಬಳಕೆ ಸಿಲಿಂಡ‌ರ್ ಈ ವರ್ಷ
ರೂ. 302.50 ಏರಿಕೆಯಾಗಿದೆ. ಮಾರ್ಚ್ 1 ರಿಂದಷ್ಟೇ ಸಿಲಿಂಡರರ್‌ಗೆ ರೂ.28 ಏರಿಕೆ ಮಾಡಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ