Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದೂಧಸಾಗರ ಜಲಪಾತ ವೀಕ್ಷಣೆ : ಪ್ರವಾಸಿಗರಿಗೆ ಮಹತ್ವದ ಸೂಚನೆ

 

ಬೆಳಗಾವಿ : ಜೂನ್ 1 ರಿಂದ ಜಗತ್ಪ್ರಸಿದ್ಧ ದೂಧ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರ ಮಧ್ಯಸ್ಥಿಕೆಯಲ್ಲಿ ಹಿಂಪಡೆಯಲಾಗಿದೆ.

ಗೋವಾ ವನ್ಯಜೀವಿ ಹಾಗೂ ಪ್ರವಾಸೋದ್ಯಮ ಉಪಸಂರಕ್ಷಕರು ದೂಧ ಸಾಗರ ಜಲಪಾತ ಬಂದ್‍ಗೆ ಆದೇಶ ಹೊರಡಿಸಿದ್ದರು. ದೂಧ ಸಾಗರ ಜೀಪ್ ಅಸೋಸಿಯೇಶನ್ ವತಿಯಿಂದ ಈ ಬಂದ್ ಆದೇಶ ಹಿಂಪಡೆಯುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿತ್ತು.

ಗೋವಾದ ಭಗವಾನ್ ಮಹಾವೀರ ರಾಷ್ಟ್ರೀಯ ಉದ್ಯಾನವನದಲ್ಲಿ ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವಿದೆ. ಈ ಜಲಪಾತ ವೀಕ್ಷಣೆಗೆ ದೇಶವಿದೇಶಗಳಿಂದ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಕಳೆದ ಕೆಲ ವರ್ಷಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಪ್ರವಾಸಿಗರು ಜಲಪಾತದಲ್ಲಿ ಬಿದ್ದು ಸಾವನ್ನಪ್ಪುವ ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಳೆಗಾಲದ ಸಂದರ್ಭದಲ್ಲಿ ಜಲಪಾತದ ಬಳಿ ತೆರಳಲು ನಿರ್ಬಂಧ ಹೇರಲಾಗುತ್ತಿತ್ತು.
ಎಲ್ಲಿಯವರೆಗೆ ದೂಧ ಸಾಗರ ಜಲಪಾತ ಬಂದ್ ಮಾಡುವ ಮರು ಆದೇಶ ಬರುತ್ತದೆಯೋ ಅಲ್ಲಿಯ ವರೆಗೆ ಜಲಪಾತದ ಬಳಿ ತೆರಳಲು ಅವಕಾಶ ಲಭಿಸಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ದೂಧಸಾಗರ ಜೀಪ್ ಅಸೋಸಿಯೇಶನ್ ಸಂಸತ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಾವಂತ್ ಹಾಗೂ ಶಾಸಕ ಗಣೇಶ್ ಗಾವಕರ್ ರವರಿಗೆ ಆಭಾರ ವ್ಯಕ್ತಪಡಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?