Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿವೈ ಎಸ್ ಪಿ, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣು

ಬೆಳಗಾವಿ: ವ್ಯಕ್ತಿಯೋರ್ವರು ಡಿವೈ ಎಸ್ ಪಿ, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಡಿಗೇರಿ ಗ್ರಾಮದ ರವೀಂದ್ರ ದಾನವ್ವಗೋಳ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದಕ್ಕೆ ಹಾಗೂ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಅವರೂ ಕೂಡ ನಿರ್ಲಕ್ಷ ಮಾಡಿ ಬೆದರಿಕೆ ಹಾಕಿದ್ದಕ್ಕೆ ಮನನೊಂದ ರವೀಂದ್ರ ನೇಣಿಗೆ ಕೊರಳೊಡ್ಡಿದ್ದಾರೆ.

ರವೀಂದ್ರ, ಲಕ್ಷ್ಮಣ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ಎಂಬುವರಿಗೆ 8 ಲಕ್ಷ ರೂಪಾಯಿ ಸಾಲ ನೀಡಿದ್ದರು.  ಈ ಹಣವನ್ನು ಲಕ್ಷ್ಮಣ ಚಂದರಗಿ ಮತ್ತು ಭರಮಪ್ಪ‌ ಪೂಜಾರಿ ವಾಪಸ್ ಕೊಟ್ಟಿಲ್ಲ. ಬದಲಾಗಿ ಹಣ ಕೇಳಿದ್ದಕ್ಕೆ ರವೀಂದ್ರಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ನ್ಯಾಯ ಕೊಡಿಸಿ ಎಂದು ರವೀಂದ್ರ, ಪಿಎಸ್‌ಐ ಆನಂದ, ಹಿಂದಿನ ಡಿವೈಎಸ್​​ಪಿ ಮುಲ್ಲಾಗೆ ಮನವಿ ಮಾಡಿದ್ದರಂತೆ. ಆದರೆ ಪೊಲೀಸರು ಸಹ ಈ ಬಗ್ಗೆ ನಿರ್ಲಕ್ಷ ಮಾಡಿದ್ದಾರೆ. ಸಾಲದ್ದಕ್ಕೆ ಪೊಲೀಸರು ಸಹ ಬೆದರಿಕೆ ಹಾಕಿದ್ದಾರೆ ಎಂದು ರವೀಂದ್ರ ಆತ್ಮಹತ್ಯೆಗೆ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಮೂಡಲಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮೂಡಲಗಿ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ