Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಂಸದ, ಇಬ್ಬರು ಶಾಸಕರ ಮನೆ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆಎಂದು ವರದಿಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆರಬಹುದು ಎಂದು ಭಾವಿಸಲಾಗಿದೆ.
ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ, ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ ರೆಡ್ಡಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇ.ಡಿ.ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು ತಮ್ಮ ನಿವಾಸಗಳಲ್ಲಿ ಇದ್ದರು ಎನ್ನಲಾಗಿದೆ.
ಬುಧವಾರ ಬೆಳಗಿನ ಜಾವ 4ರಿಂದ 5 ಗಂಟೆಯ ಸುಮಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಸುಮಾರು ಏಳೆಂಟು ತಂಡಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳು ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಯಾವ ಪ್ರಕರಣದಲ್ಲಿ ಸಂಸದರು ಮತ್ತು ಶಾಸಕರ ಮನೆಗಳ ಮೇಲೆ ದಾಳಿ ನಡೆದಿದೆ ಎಂಬುದು ಖಚಿತವಾಗಿಲ್ಲವಾದರೂ ನಾಗೇಂದ್ರ ಅವರ ಆಪ್ತ ಗೋವರ್ಧನ ರೆಡ್ಡಿ ಮನೆ ಮೇಲೆಯೂ ದಾಳಿ ನಡೆದಿರುವುದರಿಂದ ಇದು ವಾಲ್ಮೀಕಿ ನಿಗಮದ ಹಗರಣದ ತನಿಖೆಗೆ ಸಂಬಂಧಿಸಿರಬಹುದು ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ವಾಲ್ಮೀಕಿ ನಿಗಮದ ಹಣವನ್ನು ಬಳಸಲಾಗಿದೆ ಎಂಬ ಆರೋಪವಿದ್ದು, ಸುಮಾರು 20 ಕೋಟಿ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಲಾಗಿದೆ ಎಂದು ಆರೋಪಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ