Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಚಿವ ಸತೀಶ ಜಾರಕಿಹೊಳಿ ಸಹೋದರಿಯ ಪತಿಗೆ ಬಿಗ್ ಶಾಕ್ ನೀಡಿದ ED

ಬೆಳಗಾವಿ: ರಾಜ್ಯದ ಪ್ರಭಾವಿ ಸಚಿವ ಸತೀಶ ಜಾರಕಿಹೊಳಿ ಅವರ ಸಹೋದರಿಯ ಪತಿಗೆ ಇಡಿ ಬುಧವಾರ ಬೆಳಗ್ಗೆ ಬಿಗ್ ಶಾಕ್ ನೀಡಿದೆ. ಮಂಜುನಾಥ ಮನೆ ಸೇರಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ ಅವರ ಮೇಲೆ ಈ ದಾಳಿ ನಡೆದಿದೆ. ಈ ದಾಳಿ ಬೆಳಗಾವಿಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಡಾ.ವೈ.ಮಂಜುನಾಥ ಅವರ ಮನೆ ಮತ್ತು ಕಚೇರಿಗಳ ಮೇಲೆ ಬುಧವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪಕ್ಕೆ ಸಂಬಂಧಿಸಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಸಚಿವ ಸತೀಶ ಜಾರಕಿಹೊಳಿ ಅವರ ಸಹೋದರಿಯ ಪತಿ, ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರನಾಗಿರುವ ಮಂಜುನಾಥ ಅವರನ್ನು ಗುರಿಯಾಗಿರಿಸಿ ಗೋವಾ ಮತ್ತು ಬೆಂಗಳೂರಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಏಕಕಾಲದಲ್ಲಿ ಬೆಳಗಾವಿ, ಬೆಂಗಳೂರು, ಮೈಸೂರು ಮತ್ತು ಗೋವಾದಲ್ಲಿ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಅಧಿಕಾರಿಗಳು ದಾಳಿ ವೇಳೆ ಭದ್ರತೆಗಾಗಿ ಅರೆಸೇನಾ ಪಡೆಯ ಸಿಬಂದಿಗಳನ್ನು ಬಳಸಿಕೊಂಡಿದ್ದಾರೆ.

ಬೆಳಗಾವಿ, ಮೈಸೂರು, ಬೆಂಗಳೂರು, ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿರುವ ಎರಡೂ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ