Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಸಗೊಬ್ಬರ ಅಭಾವ : ಕೇಂದ್ರ ಸಚಿವರನ್ನು ಭೇಟಿಯಾದ ಈರಣ್ಣ ಕಡಾಡಿ ಹಾಗೂ ಸಂಸದರು

ಮೂಡಲಗಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ಅವರನ್ನು ಕರ್ನಾಟಕ ಬಿಜೆಪಿ ಸಂಸದರ ನಿಯೋಗದೊಂದಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಭೇಟಿಯಾಗಿ ರಾಜ್ಯದಲ್ಲಿ ರಸಗೊಬ್ಬರದ ವಿತರಣೆಯಲ್ಲಿ ಆಗಿರುವ ಗೊಂದಲ ಕುರಿತು ಸಚಿವರೊಂದಿಗೆ ಚರ್ಚಿಸಿದರು.

ನವದೆಹಲಿಯಲ್ಲಿ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು, ಖಾರಿಫ್ ಋತುವಿಗೆ ಕರ್ನಾಟಕ ರಾಜ್ಯ 6.30 ಲಕ್ಷ ‌ಮೆಟ್ರಿಕ್ ಟನ್ ಯೂರಿಯಾ ಪೂರೈಸಲು ಕೊಡಲಾಗಿತ್ತು. ರಾಜ್ಯದ ರೈತರ‌ ಹಿತದೃಷ್ಟಿಯಿಂದ ಕೇಂದ್ರ ರಸಗೊಬ್ಬರ ಇಲಾಖೆ ಜುಲೈ ಅಂತ್ಯಕ್ಕೆ 8.73 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ರಾಜ್ಯದಲ್ಲಿ‌ ಇಲ್ಲಿಯವರೆಗೆ 7.08 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಮಾರಾಟವಾಗಿದೆ. 1.65 ಲಕ್ಷ ಮೆಟ್ರಿಕ್ ಟನ್‌ ಯೂರಿಯಾ ರಾಜ್ಯದ ಗೋದಾಮಿನಲ್ಲಿ ದಾಸ್ತಾನು ಇರುವುದಾಗಿ ಮಾಹಿತಿ ನೀಡಿದರು. ಜೊತೆಗೆ ಈಗಾಗಲೇ ಸುಮಾರು 16 ಸಾವಿರ ಟನ್‌ ರಸಗೊಬ್ಬರವನ್ನು ರಾಜ್ಯಕ್ಕೆ ಕಳುಹಿಸಿ ಕೊಡುತ್ತಿದ್ದೇವೆ ಎಂದು ಸಚಿವರು ನಮ್ಮ ನಿಯೋಗಕ್ಕೆ ವಿವರ ನೀಡಿದ್ದಾರೆ ಎಂದರು.

ಕರ್ನಾಟಕ ರಾಜ್ಯದ ಕಲಬುರ್ಗಿ, ಕೊಪ್ಪಳ, ಶಿವಮೊಗ್ಗ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಉಂಟಾಗಿದ್ದು, ರಾಜ್ಯ ಸರ್ಕಾರ ತನ್ನ ಬಳಿ ಇರುವ 1.65 ಲಕ್ಷ ಮೆಟ್ರಿಕ್ ಟನ್‌ ರಸಗೊಬ್ಬರವನ್ನು ಸರಿಯಾಗಿ ವಿತರಣೆ ಮಾಡುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಅವಶ್ಯಕತೆ ಇದೆ ಎಂದು ಮನವರಿಕೆ ಮಾಡಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಉಂಟಾಗಿರುವ ಅಧಿಕಾರ ಹಂಚಿಕೆಯ ಗಲಾಟೆಯಲ್ಲಿ ರಸಗೊಬ್ಬರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದು ಮುಕ್ತ ಮಾರುಕಟ್ಟೆಯಲ್ಲಿ ಏಜೆಂಟರು ಯೂರಿಯಾ ರಸಗೊಬ್ಬರದ ದುರ್ಬಳಕೆ ಮಾಡಿಕೊಂಡಿದ್ದು ಅಂತವರಿಗೆ ಅವಕಾಶ ನೀಡಿ ರೈತರನ್ನು ಬೀದಿಗೆ ತಳ್ಳಿ ಕೇಂದ್ರ ಸರ್ಕಾರದ ಕಡೆಗೆ ಬೆರಳು ತೋರಿಸುವುದು ಎಷ್ಟು ಸರಿ ? ರೈತರ ರಸಗೊಬ್ಬರ ವಿಷಯದಲ್ಲಿ ರಾಜಕೀಯ ಮಾಡಲಾರದೇ ಸರಿಯಾದ ವಿತರಣೆಗೆ ಕ್ರಮಕೈಗೊಂಡು ರೈತರ ನೆರವಿಗೆ ಧಾವಿಸಬೇಕಾದ ಅವಶ್ಯಕತೆ ಇದೆ.

ಈ ನಿಯೋಗದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಹ್ಲಾದ ಜೋಶಿ, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ, ಸಂಸದರಾದ ಜಗದೀಶ ಶೆಟ್ಟರ, ವಿಶ್ವೇಶ್ವರ ಹೆಗಡೆ ಕಾಗೇರಿ, ಪಿ.ಸಿ ಗದ್ದಿಗೌಡರ, ರಮೇಶ ಜಿಗಜಿಣಗಿ, ಡಾ. ಕೆ. ಸುಧಾಕರ, ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?