Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚಂದರಗಿ ಕ್ರೀಡಾ ಶಾಲೆಗೆ ಕೇಂದ್ರ ಸಚಿವರನ್ನು ಆಹ್ವಾನಿಸಿದ ಈರಣ್ಣ ಕಡಾಡಿ

ಬೆಳಗಾವಿ : ಚಂದರಗಿ ಗ್ರಾಮದಲ್ಲಿ ಸಹಕಾರ ಕ್ಷೇತ್ರದಲ್ಲಿ ನಿರ್ಮಾಣಗೊಂಡ ದೇಶದ ಏಕೈಕ ಕ್ರೀಡಾ ವಸತಿ ಶಾಲೆಯಲ್ಲಿ ರೂ. 1.50 ಕೋಟಿ ವೆಚ್ಚದಲ್ಲಿ ಅಂತರಾಷ್ಟ್ರೀಯ ಮಟ್ಟದ ಅತ್ಯಾಧುನಿಕ ಸೈಕ್ಲಿಂಗ್ ಟ್ರ‍್ಯಾಕ್ (ವೆಲೊಡ್ರೋಮ್) ಅನ್ನು ಉದ್ಘಾಟಿಸಲು ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸಚಿವರನ್ನು ವಿನಂತಿಸಿದರು.

ಚಂದರಗಿ ಕ್ರೀಡಾ ವಸತಿ ಶಾಲೆ ಸಹಕಾರ ಕ್ಷೇತ್ರದಲ್ಲಿ ನಡೆಯುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಸದರಿ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಸೈಕ್ಲಿಂಗ್ ಟ್ರ‍್ಯಾಕ್ ಬೆಂಗಳೂರು ನಂತರ ಉತ್ತರ ಕರ್ನಾಟಕದ ಏಕೈಕ ಅಂತರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಟ್ರ‍್ಯಾಕ್ ಆಗಿರುತ್ತದೆ. ಇದರಡಿ ಸೈಕ್ಲಿಂಗ್ ತರಬೇತಿಗೆ ಬೇಕಾದ ಮೂಲಸೌಕರ್ಯ ಅಭಿವೃದ್ದಿ, ಪರಿಣಿತ ತರಬೇತಿ ತಂಡ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ನಿರ್ಮಾಣದೊಂಡಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಂದ ಬಂದ ಸೈಕ್ಲಿಂಗ್ ಪಟುಗಳನ್ನು ಗಮನದಲ್ಲಿ ಇಟ್ಟುಕೊಂಡು ಅವರಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆಯೊಡ್ಡಲು ಈ ಸಂಸ್ಥೆ ಸಹಕಾರಿಯಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಸಚಿವರು ಸಂಸ್ಥೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು, ಡೇರಿ ಫಾರ್ಮ ಮತ್ತು ಲೋಕಸಭೆ ಹೊಲುವ ಮಾದರಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಡೈನಿಂಗ್ ಹಾಲ್ ಮತ್ತು ಶಾಲೆಗಳಿಗಾಗಿ ತರಕಾರಿಗಳನ್ನು ಬೆಳೆಯುವುದು ಹೀಗೆ ಹಲವಾರು ಮಾಹಿತಿಗಳನ್ನು ಪಡೆದ ಸಚಿವರು ಸಂತಸ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಹಿತೈಷಿ ಸಿದ್ದರಾಮ ಕಲೂತಿ ಮತ್ತು ಸಂಸ್ಥೆಯ ನಿರ್ದೇಶಕ ಪೃಥ್ವಿರಾಜ ಜಾಧವ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ