Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಈಗೇನಿದ್ರೂ ಬ್ರೇಕಿಂಗ್ ಸುದ್ದಿ ಕಾಲ : ನಕಾರಾತ್ಮಕ ಸುದ್ದಿಗಳಿಗೆ ಪ್ರಾಧಾನ್ಯತೆ ಬೇಡ...

ಬೆಳಗಾವಿ : ನಕಾರಾತ್ಮಕವಾಗಿ ಸುದ್ದಿಗಳಿಗೆ ಮಾಧ್ಯಮಗಳು ಪ್ರಾಧಾನ್ಯತೆ ನೀಡಬಾರದು ಎಂದು ಹಿರಿಯ ಸಾಹಿತಿ ಸಿದ್ದು ಯಾಪಲಪರವಿ ಹೇಳಿದರು.

ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಪತ್ರಕರ್ತರ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮಾತನಾಡಿದರು.
ವಿಶೇಷವಾಗಿ ಪ್ರಸಾರವಾಗುವ ಬ್ರೇಕಿಂಗ್ ನ್ಯೂಸ್ ಗಳಲ್ಲಿ ಹೆಚ್ಚಾಗಿರುತ್ತದೆ. ಅದಕ್ಕೆ ಬದಲಾಗಿ ಸಕಾರಾತ್ಮಕ ಸುದ್ದಿಗಳಿಗೆ ಪ್ರಾಧಾನ್ಯತೆ ನೀಡುವ ಮೂಲಕ ‌ ಪತ್ರಿಕೋದ್ಯಮಕ್ಕೊಂದು ಹೊಸ ಆಯಾಮ ನೀಡಬೇಕು ಎಂದು ಅವರು ಸಲಹೆ ನೀಡಿದರು.
ಹಿರಿಯ ಪತ್ರಕರ್ತ ಮತ್ತು ಸಾಹಿತ್ಯ ಎಲ್‌.ಎಸ್ .ಶಾಸ್ತ್ರಿ ಮಾತನಾಡಿ, ಪ್ರತಿಯೊಂದು ಸುದ್ದಿಯನ್ನು ಪ್ರತಿಯೊಂದು ಘಟನೆಯನ್ನು ಸಂದರ್ಭವನ್ನು ಸಂಸ್ಕರಿಸಿ ಸಮಾಜಕ್ಕೆ ಯಾವುದು ಉತ್ತಮ ಅದನ್ನು ಮಾತ್ರ ನೀಡುವ ಕಾರ್ಯ ಆಗಬೇಕಿದೆ ಎಂದ ಅವರು ಇಂದು ಸಂಸ್ಕಾರವಿಲ್ಲದ ವಿಚಾರಗಳೆ ಹೆಚ್ಚಿನ ಪ್ರಮಾಣದಲ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು ಅದು ನಿಲ್ಲಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅಲ್ಲಮಪ್ರಭು ಮಹಾಸ್ವಾಮಿಗಳು ಬೆಳಗಾವಿಯಂತಹ ಗಡಿ ಭಾಗದಲ್ಲಿ ಕೇಂದ್ರ ಸ್ಥಾನವಾಗಿಸಿಕೊಂಡು ರಾಜ್ಯದಾದ್ಯಂತ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಪತ್ರಕರ್ತರ ಸಂಘದ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದ ಅವರು ಇದಕ್ಕಿಂತಲೂ ಹೆಚ್ಚಿನ ಸೇವಾ ಕಾರ್ಯ ಗ್ರಾಮೀಣ ಭಾಗದ ಪತ್ರಕರ್ತರಿಗೆ ಇವರಿಂದ ಸಲ್ಲಲಿ ಎಂದು ಶುಭ ಹಾರೈಸಿದರು.
ಈವರೆಗೆ ಸರ್ಕಾರದಿಂದ ಯಾವುದೇ ರೀತಿಯ ಸವಲತ್ತನ್ನು ಪಡೆಯದೆ ಯಾರಿಂದಲೂ ಆರ್ಥಿಕ ಸಹಾಯವನ್ನು ಬಯಸದೆ ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗಿದ್ದಲ್ಲದೆ ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ಕಾಲಕಾಲಕ್ಕೆ ಸಹಾಯ ಮಾಡುತ್ತಿರುವುದು ಅತ್ಯಂತ ಸಂತಸದ ವಿಷಯ ಇಂತಹ ಪತ್ರಿಕಾ ಸಂಘಟನೆಗೆ ಸರ್ಕಾರ ಕೂಡ ಅಗತ್ಯದ ಎಲ್ಲ ರೀತಿಯ ಸಹಕಾರ ಸವಲತ್ತನ್ನು ನೀಡಿ ಪ್ರೋತ್ಸಾಹಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮುರುಗೇಶ್ ಶಿವಪೂಜಿ ಸಾಂದರ್ಭಿಕವಾಗಿ ಮಾತನಾಡಿದರು.

ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮಂಗಲಾ ಮೆಟಗುಡ್ ಅವರು ಸುಮಾರು ವರ್ಷಗಳಿಂದ ಸಂಘದ ಚಟುವಟಿಕೆಗಳನ್ನು ಹತ್ತಿರದಿಂದ ತಾವು ನೋಡುತ್ತಿದ್ದು ತಮಗೆ ಸಂತಸ ತಂದಿದೆ ತಮ್ಮ ಸಂಪೂರ್ಣ ಸಹಕಾರ ಬೆಂಬಲ ಈ ಚಟುವಟಿಕೆಗಳಿಗೆ ಇದೆ ಎಂದು ಹೇಳಿದರು.

ಹಿರಿಯ ಪತ್ರಕರ್ತೆ ಸುಧಾ ಪಟ್ಟೇದ ಮತ್ತು ಶಶಿ ಬೆಳಗುಂದಕರ್ ಅವರನ್ನು ಸಂಘದ ಪರವಾಗಿ ಸತ್ಕರಿಸಲಾಯಿತು.
ಸಂಘದ ಹಿರಿಯ ಉಪಾಧ್ಯಕ್ಷ ಸುದೇಶ ಕುಮಾರ್ ಅವರು ಕಾರ್ಯಕ್ರಮವನ್ನು ನಿರ್ದೇಶಿಸಿದರು, ಸಂಘದ ಸದಸ್ಯೆ ಕೀರ್ತಿ ಕಾಸರಗೋಡು ಅವರು ಸಂಘದ ವಾರ್ಷಿಕ ವರದಿಯನ್ನು ಸಭೆಯ ಮುಂದೆ ಮಂಡಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಮುಚಳಂಬಿ ಸ್ವಾಗತಿಸಿದರು. ಕೊಪ್ಪಳ ಜಿಲ್ಲಾಧ್ಯಕ್ಷ ಶರಣಪ್ಪ ವಂದಿಸಿದರು.

ಹಿರಿಯ ಸಂಪಾದಕ ಸಲೀಂ ಧಾರವಾಡಕರ್, ಡಾ.ರಾಜೇಂದ್ರ ಪವಾರ್, ಪತ್ರಕರ್ತರ ಸಹಕಾರಿ ಸಂಘದ ಉಪಾಧ್ಯಕ್ಷ ವಿಷ್ಣು ದೇವಾಡಿಗ, ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊಸ್ಕೆರಾ,
ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಶಂಕರ್ ಕುದುರೆಮೋತಿ, ಬಾಗಲಕೋಟೆ ಜಿಲ್ಲಾಧ್ಯಕ್ಷ ವಿಜಯಶಂಕರ್, ಗದಗ ಜಿಲ್ಲಾಧ್ಯಕ್ಷ ರಮೇಶ್ ಭಜಂತ್ರಿ, ಹೊಸಪೇಟೆ ಜಿಲ್ಲಾ ಕಾರ್ಯಾಧ್ಯಕ್ಷ ಸೋಮಶೇಖರ್ ಹಿರೇಮಠ, ರಾಮನಗರ ಜಿಲ್ಲೆಯ ರೂಪೇಶ್ ಕುಮಾರ್ , ಹಾವೇರಿಯ ಮಾಲತೇಶ ಅಂಗೂರ್, ಚರಣ್ ರಾಜ್ ವಿಜಾಪುರ್, ಟ್ರಸ್ಟಿ ಬಸವರಾಜ್ ಪುಟ್ಟಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಬಂಗಾರಪ್ಪ, ಮೈಸೂರಿನ ಪೂರ್ಣಿಮಾ ಪವಾರ್ ಹಾಗೂ 20 ಜಿಲ್ಲೆಗಳ ನೂರಕ್ಕೂ ಅಧಿಕ ಪತ್ರಕರ್ತರು ಭಾಗವಹಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ