ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರಿಗೆ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಸ್ಥಾನ ನೀಡಲಾಗಿದೆ. ತಕ್ಷಣದಿಂದ ಇದು ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
ಸಚಿವ ಸಂಪುಟ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಪ್ರಕಾಶ ಹುಕ್ಕೇರಿ ಅವರಿಗೆ ನೀಡುವಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದ ರಂಗಯ್ಯ ಎನ್. ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
