Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿದ್ಯಾರ್ಥಿಯ ಹಲ್ಲು ಮುರಿದ ಶಿಕ್ಷಕಿ : ಪ್ರಕರಣ ದಾಖಲು

ಬೆಂಗಳೂರು: ಶಾಲಾ ಕೊಠಡಿಯಲ್ಲಿ ಸಹಪಾಠಿಗಳ ಜತೆ ಆಟವಾಡುತ್ತಾ ನೀರು ಚೆಲ್ಲಿ ಗಲೀಜು ಮಾಡಿದ ಕಾರಣಕ್ಕೆ ಕೋಪಗೊಂಡ ಶಿಕ್ಷಕಿಯೊಬ್ಬರನ್ನು ವಿದ್ಯಾರ್ಥಿಯನ್ನು ಥಳಿಸಿದ್ದರಿಂದ ಆತನ ಹಲ್ಲು ಮುರಿದ ಆರೋಪ ಕೇಳಿ ಬಂದಿದ್ದು, ಈಗ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಜಯನಗರ ನಾಲ್ಕನೇ ಬ್ಲಾಕ್‌ ನಿವಾಸಿಯಾಗಿರುವ ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದು, ಆತ ಸಹಪಾಠಿಗಳ ಜತೆ ಗುರುವಾರ ಮಧ್ಯಾಹ್ನ ಶಾಲಾ ಕೊಠಡಿಯಲ್ಲಿ ನೀರು ಚೆಲ್ಲುತ್ತಾ ಆಟವಾಡುತ್ತಿದ್ದ. ಈ ವಿಚಾರ ತಿಳಿದ ಹಿಂದಿ ಶಿಕ್ಷಕಿಯು ಕೋಲಿನಿಂದ ವಿದ್ಯಾರ್ಥಿಯ ಮುಖಕ್ಕೆ ಹೊಡೆದಿದ್ದಾರೆ. ಆಗ ವಿದ್ಯಾರ್ಥಿಯ ಹಲ್ಲು ಮುರಿದಿದೆ ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳು ವಿದ್ಯಾರ್ಥಿಗೆ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ಆತನ ತಂದೆ ದೂರು ಕೊಟ್ಟಿದ್ದು, ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಚಾರಣೆಗೆ ಬರುವಂತೆ ಶಿಕ್ಷಕಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
”ನಾನು ಮಧ್ಯಾಹ್ನ ಊಟ ಮಾಡಿ ಶಾಲಾ ಕೊಠಡಿಗೆ ಹೋದಾಗ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದರು. ಅವರೇ ಪರಸ್ಪರ ಹೊಡೆದಾಡಿಕೊಂಡಿದ್ದರು. ಈ ವೇಳೆ ವಿದ್ಯಾರ್ಥಿಯ ಹಲ್ಲು ಮುರಿದಿದೆ. ನಾನು ಆತನಿಗೆ ಹೊಡೆದಿಲ್ಲ. ಆ ವಿದ್ಯಾರ್ಥಿಯ ಮುಖದಲ್ಲಿ ಪಟಾಕಿ ಸಿಡಿತದ ಗಾಯ ಸಹ ಆಗಿತ್ತು. ಮಕ್ಕಳು ಹೊಡೆದಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳೇ ನನ್ನ ಮೇಲೆ ಗಮ್‌ ಎರಚಿದ್ದಾರೆ,” ಎಂದು ಶಿಕ್ಷಕಿ ಆರೋಪಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ