Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬ್ರಿಟಿಷ್ ಕಾಲದ ಕಾನೂನಿಗೆ ಕೊನೆಗೂ ಮುಕ್ತಿ : ರಾಷ್ಟ್ರಪತಿಯಿಂದ ಅಂಕಿತ

 

ದೆಹಲಿ:
ಸಂಸತ್‌ನಲ್ಲಿ ಅಂಗೀಕಾರ ಪಡೆದಿರುವ ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳಲ್ಲಿ ಆಮೂಲಾಗ್ರ ಬದಲಾವಣೆಯನ್ನು ತರುವ ಉದ್ದೇಶ ಹೊಂದಿರುವ ಮೂರು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಸೋಮವಾರ) ಅಂಕಿತ ಹಾಕಿದ್ದಾರೆ.

ಭಾರತೀಯ ನ್ಯಾಯ (ಎರಡನೆಯ) ಸಂಹಿತಾ ಮಸೂದೆ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮಸೂದೆ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ) ಮಸೂದೆಗಳಿಗೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ.

ಈ ಮಸೂದೆಗಳು ಕಾನೂನಾಗಿ ಪರಿವರ್ತನೆಗೊಂಡಿವೆ.

ಹೊಸ ಕ್ರಿಮಿನಲ್‌ ಕಾನೂನು ಮಸೂದೆಗಳ ವಿಚಾರವಾಗಿ ಇತ್ತೀಚೆಗೆ ಲೋಕಸಭೆಯಲ್ಲಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹೊಸ ಮಸೂದೆಗಳು ದೇಶದ ಜನರನ್ನು ವಸಾಹತು ಕಾಲದ ಮನಃಸ್ಥಿತಿಯಿಂದ ಮುಕ್ತಗೊಳಿಸಲಿವೆ ಎಂದು ಹೇಳಿದ್ದರು.

ಈ ಮೂರು ಮಸೂದೆಗಳು ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ದಂಡಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಜಾರಿಗೆ ಬರಲಿವೆ. ‘ಬ್ರಿಟಿಷರ ಕಾಲದಲ್ಲಿ ಈ ಮೂರು ಕಾನೂನುಗಳನ್ನು ರಚಿಸಲಾಯಿತು. ಈ ಕಾನೂನುಗಳನ್ನು ತೆಗೆದುಹಾಕುವವರೆಗೆ ಬ್ರಿಟನ್ನಿನ ಕಾನೂನುಗಳು ದೇಶದಲ್ಲಿ ಮುಂದುವರಿಯುತ್ತವೆ’ ಎಂದು ಶಾ ತಿಳಿಸಿದ್ದರು.

ಮೂರು ಮಸೂದೆಗಳು ‘ಸಂತ್ರಸ್ತರನ್ನು ಕೇಂದ್ರೀಕರಿಸಿಕೊಂಡ’, ‘ಸಾಕ್ಷ್ಯ ಆಧಾರಿತ’ ಹಾಗೂ ನ್ಯಾಯ ಪಡೆಯುವುದನ್ನು ಸುಲಲಿತವಾಗಿಸುವ ವ್ಯವಸ್ಥೆಯನ್ನು ಸೃಷ್ಟಿಸಲಿವೆ ಎಂದು ಶಾ ಹೇಳಿದ್ದರು. ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗಳು, ಸಂಸದರು, ಶಾಸಕರು, ಐಪಿಎಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಂದ ಒಟ್ಟು 3,200ಕ್ಕೂ ಹೆಚ್ಚು ಸಲಹೆಗಳನ್ನು ಪಡೆದು ಇವುಗಳನ್ನು ರೂಪಿಸಲಾಗಿದೆ ಎಂಬ ಮಾಹಿತಿ ನೀಡಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?