Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಮುನಿಸು ಶಮನ- ಮನವೊಲಿಸಿದ ಬಿಜೆಪಿ ಅಭ್ಯರ್ಥಿ

 

ಬೆಳಗಾವಿ : ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ರಾಮದುರ್ಗದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಅವರ ಮನವೊಲಿಸುವಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಕೊನೆಗೂ ಯಶಸ್ವಿಯಾಗಿದ್ದಾರೆ.
ರಾಮದುರ್ಗದ ಮಹಾದೇವಪ್ಪ ಯಾದವಾಡ ನಿವಾಸಕ್ಕೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಸುದೀರ್ಘ ಮಾತುಕತೆ ನಡೆಸಿ ಈ ಬಾರಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಲ್ಲಣ್ಣ ಯಾದವಾಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು. ಮಹಾದೇವಪ್ಪ ಯಾದವಾಡ ಮಾತನಾಡಿ, ಹಿಂದಿನ ಚುನಾವಣೆಗಳಲ್ಲಿ ಸುರೇಶ ಅಂಗಡಿ ಅವರಿಗೆ ನೀಡುತ್ತಿದ್ದ 27000 ಲೀಡನ್ನು ಜಗದೀಶ್ ಶೆಟ್ಟರ್ ಅವರಿಗೆ ಸಹಾ ನೀಡುತ್ತೇವೆ. ರಾಮದುರ್ಗದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆಯಲ್ಲಿ
ಮಹಾದೇವಪ್ಪ ಯಾದವಾಡ ಅವರು ಬಿಜೆಪಿ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದರು. ಕಾಂಗ್ರೆಸ್ ಇವರನ್ನು ಸೆಳೆಯಲು ಮುಂದಾಗಿತ್ತು. ಆದರೆ ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಶೆಟ್ಟರ್ ಅವರ ಮನೆಗೆ ಭೇಟಿ ನೀಡಿ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ