Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಲಾವಣ್ಯ ಹಂತಕನ ಸೆರೆ

ಮಂಗಳೂರು: ಬಸ್‌ ನಿಲ್ದಾಣದಲ್ಲಿ ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಭೀಕರ ಘಟನೆಯಲ್ಲಿ ಯುವತಿಯ ಹತ್ಯೆ ಪ್ರಕರಣ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಸಮೀಪದ ವಾಮಂಜೂರು ಪಚ್ಚನಾಡಿಯಲ್ಲಿ ಹಂತಕ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವತಿಯನ್ನು ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕೆಲಸ ಮುಗಿಸಿ ಮನೆಗೆ ತೆರಳಲು ಬಸ್‌ ಕಾಯುತ್ತಿದ್ದ ವೇಳೆ ಆರೋಪಿ ಮಾರಕಾಸ್ತ್ರದಿಂದ ಹಲವು ಬಾರಿ ಹಲ್ಲೆ ನಡೆಸಿದ್ದಾನ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದರು.

ಘಟನೆ ವಿವರ :
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ಘಟನೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದರು. ಸಾರ್ವಜನಿಕರ ಮುಂದೆಯೇ ಯುವಕನೋರ್ವ ಯುವತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಗುರುವಾರ (ಜುಲೈ 16) ಸಂಜೆ ನಡೆದಿತ್ತು.
ಮೃತ ಯುವತಿಯನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವು ಗ್ರಾಮದ ಉಳಿ ನಿವಾಸಿ ಲಾವಣ್ಯ (21) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ (22) ಎಂದು ಪೊಲೀಸರು ಗುರುತಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯು ಮೃತಳಿಗೆ ದೂರದ ಸಂಬಂಧಿಕನಾಗಿದ್ದು, ಲಾವಣ್ಯ ನಿರಾಕರಿಸಿದರೂ ಆತ ಆಕೆಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಹಾಗೂ ಹಿಂಬಾಲಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಲಾವಣ್ಯ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಕೆಲಸ ಮುಗಿಸಿ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದ ಅವರು ಕಕ್ಕೆಪದವುಗೆ ತೆರಳುವ ಬಸ್‌ಗೆ ಹತ್ತಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಆರೋಪಿಯನ್ನು ಗಮನಿಸಿದ ಲಾವಣ್ಯ, ಬಸ್‌ನಿಂದ ಇಳಿದು ಸ್ಥಳದಿಂದ ಹೊರಟು ಹೋಗಲು ಪ್ರಯತ್ನಿಸಿದ್ದಾರೆ.
ಈ ಸಂದರ್ಭದಲ್ಲಿ ಆರೋಪಿಯು ಆಕೆಯನ್ನು ಬೆನ್ನಟ್ಟಿದ್ದು, ತನ್ನ ಬ್ಯಾಗ್‌ನಲ್ಲಿದ್ದ ಮಾರಕಾಸ್ತ್ರ ಹೊರತೆಗೆದು ಲಾವಣ್ಯ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಲಾವಣ್ಯ ಎಷ್ಟೇ ಪ್ರಯತ್ನಿಸಿದರೂ ಆರೋಪಿಯು ಆಕೆಯನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಲಾವಣ್ಯ ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಯು ಬಸ್ ನಿಲ್ದಾಣದ ಮತ್ತೊಂದು ಬದಿಯಿಂದ ಪರಾರಿಯಾಗಿಯಾಗಿದ್ದಾನೆ.

ಗುರುವಾರ ಸಂಜೆ ಸುಮಾರು 6 ಗಂಟೆಯ ವೇಳೆಗೆ ನೂರಾರು ಪ್ರಯಾಣಿಕರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ನಡೆದ ಈ ಭೀಕರ ಕೃತ್ಯದಿಂದ ಬಸ್ ನಿಲ್ದಾಣದಲ್ಲಿದ್ದ ಜನರು ಬೆಚ್ಚಿಬಿದ್ದಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಾಥಮಿಕ ತನಿಖೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಡಾ. ಅರುಣಕುಮಾರ ಪ್ರತಿಕ್ರಿಯಿಸಿ, “ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಯುವಕನೋರ್ವ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಮಾಹಿತಿ ದೊರೆತಿದೆ. ಆರೋಪಿಯನ್ನು ಶೀಘ್ರವೇ ಪತ್ತೆಹಚ್ಚಿ ಬಂಧಿಸಲು ವಿಶೇಷ ಪೊಲೀಸ್ ತಂಡಗಳನ್ನು ಈಗಾಗಲೇ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಹಿಂದಿನ ಉದ್ದೇಶ ಸೇರಿದಂತೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಈ ಕೊಲೆಯು ಏಕಮುಖ ಪ್ರೇಮ ಪ್ರಕರಣದ ಹಿನ್ನೆಲೆಯಿಂದ ನಡೆದಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ನಿಖರ ಕಾರಣವು ಸಮಗ್ರ ತನಿಖೆಯ ಬಳಿಕವೇ ತಿಳಿದುಬರಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಆರೋಪಿಯನ್ನು ಬಂಧಿಸಲು ಬೃಹತ್ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಹಲವು ವಿಶೇಷ ಪೊಲೀಸ್ ತಂಡಗಳು ವಿವಿಧ ಕಡೆಗಳಲ್ಲಿ ತೀವ್ರ ಶೋಧ ಮುಂದುವರಿಸಿವೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊನೆಗೂ ಲಾವಣ್ಯ ಹಂತಕನ ಸೆರೆಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಬೆಳಗಾವಿಗೆಲಾರ್ಡ್ಸ್ ನಲ್ಲಿ ರೋಹಿತ್ ಶರ್ಮಾ ಕೊನೆಯ ಆಟವೇ ?ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ: 31ನೇ ಕಂತಿನ ಹಣ ಬಿಡುಗಡೆವೃತ್ತಿ ಮಾರ್ಗದರ್ಶನ ಕೈಪಿಡಿಯನ್ನು ಬಿಡುಗಡೆಗೊಳಿಸಿದ ಈಶ್ವರ ಉಳ್ಳಾಗಡ್ಡಿನುಗ್ಗಾನಟ್ಟಿಯಲ್ಲಿ ಕೌಟುಂಬಿಕ ಕಲಹ: ಜೋಡಿ ಕೊಲೆ19 ವರ್ಷದ ಹಿಂದೆ ಮಗುವಿಗೆ ಸ್ನಾನ ಮಾಡಿಸಿ ಮಡಿಲಲ್ಲಿ ಮಲಗಿಸಿಕೊಂಡಿದ್ದ ಮೆಸ್ಸಿ ; ಈಗ ಆ ಮಗುವೇ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಎದುರಾಳಿ !ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಪ್ಯಾರಲಲ್ ಟ್ಯಾಕ್ಸಿ ಟ್ರ್ಯಾಕ್ ನಿರ್ಮಾಣದ ಕುರಿತು ಸಂಸದ ಶೆಟ್ಟರ ಸಭೆವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿ