Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಆಯ್ಕೆ

ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಆಯ್ಕೆ ನಡೆದಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡಣವೀಸ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೇವೇಂದ್ರ ಫಡಣವೀಸ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಗುರುವಾರ ಸಂಜೆ 5.30ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಆಜಾದ್ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.

ಏಕನಾಥ ಶಿಂದೆ ಮತ್ತು ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ದೇವೇಂದ್ರ ಫಡಣವೀಸ್ ಹೆಸರು ಮುಂಚೂಣಿಯಲ್ಲಿದ್ದ ಕಾರಣ ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಹಾಗೂ ಶಿವಸೇನಾ (ಶಿಂದೆ ಬಣ) ಮುಖ್ಯಸ್ಥ ಏಕನಾಥ ಶಿಂದೆ ಅವರು ನೂತನ 'ಮಹಾಯುತಿ' ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ ಎನ್‌ಸಿಪಿ ಮುಖ್ಯಸ್ಥ ಅಜಿತ್‌ ಪವಾ‌ರ್ ಅವರು ಸೋಮವಾರ ಮತ್ತು ಮಂಗಳವಾರ ನವದೆಹಲಿಯಲ್ಲಿದ್ದುಕೊಂಡು, ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ನೂತನ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ಪಡೆಯಲು ಎನ್‌ಸಿಪಿ ಮತ್ತು ಶಿವಸೇನಾ ತೀವ್ರ ಕಸರತ್ತು ನಡೆಸಿವೆ.

ಫಡಣವೀಸ್ ಅವರು ಮಂಗಳವಾರ ರಾತ್ರಿ, ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ 'ವರ್ಷಾ'ದಲ್ಲಿ ಶಿಂದೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಳೆದ ವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಇವರಿಬ್ಬರು ಭೇಟಿಯಾಗಿದ್ದು ಇದೇ ಮೊದಲು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ