Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊನೆಗೂ ಬಿಗ್ ಶಾಕ್ ನೀಡಿದ ಸರಕಾರ ; ಬಸ್‌ ‍ಪ್ರಯಾಣ ದರ ಹೆಚ್ಚಳ: ಇಂದು ಮಧ್ಯರಾತ್ರಿಯಿಂದಲೇ ಜಾರಿ- ಪ್ರಯಾಣಿಕರ ಜೇಬಿಗೆ ಕತ್ತರಿ

ಬೆಂಗಳೂರು: ಹಲವಾರು ತಿಂಗಳುಗಳಿಂದ ಬಸ್ ಪ್ರಯಾಣ ದರ ಏರಿಕೆಯಾಗುತ್ತದೆ ಎಂಬ ಊಹಾಪೋಹಗಳು ಹರಡಿದ್ದವು. ಆದೀಗ ನಿಜವಾಗಿದೆ. ಇಂದಿನಿಂದಲೇ ಅನ್ವಯವಾಗುವಂತೆ ಬಸ್ ಪ್ರಯಾಣ ದರ ಏರಿಕೆಯಾಗುತ್ತಿದೆ. ಇದು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದ್ದು ಪ್ರಯಾಣಿಕರು ಇನ್ನು ಮೇಲೆ ತಮ್ಮ ಜೇಬಿನಿಂದ ಹೆಚ್ಚಿನ ಹಣ ತೇರುವ ಅನಿವಾರ್ಯತೆ ಸೃಷ್ಟಿಯಾಗಿದೆ.

ಬಸ್‌ ‍ಪ್ರಯಾಣ ದರವು ಏರಿಕೆ ಎಲ್ಲ ನಾಲ್ಕು ನಿಗಮಗಳಲ್ಲಿ ಶನಿವಾರ (ಜ.4) ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.

ಬಸ್‌ಗಳ ಟಿಕೆಟ್‌ ದರವನ್ನು ಶೇ 15ರಷ್ಟು ಏರಿಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿತ್ತು. ಜ.4ರ ಮಧ್ಯರಾತ್ರಿ 12 ಗಂಟೆಯ ಬಳಿಕ (ಜ.5) ಹೊರಡುವ ಬಸ್‌ಗಳಿಗೆ ಅನ್ವಯವಾಗಲಿದೆ.

ಬೆಂಗಳೂರು ನಗರದಲ್ಲಿ ವಿಮಾನ ನಿಲ್ದಾಣಕ್ಕೆ ಸಂಚರಿಸುವ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಉಳಿದವುಗಳಲ್ಲಿ ಕನಿಷ್ಠ ₹ 1 ಮತ್ತು ಗರಿಷ್ಠ ₹ 3 ಹೆಚ್ಚಳವಾಗಲಿದೆ. ಮೊದಲ ಸ್ಟೇಜ್‌ಗೆ ಸದ್ಯ ₹ 5 ದರ ಇದ್ದು, ಇನ್ನು ಮುಂದೆ ₹ 6 ಆಗಲಿದೆ. ಎರಡನೇ ಸ್ಟೇಜ್‌ನಿಂದ ದರ ಇದೇ ಮಾದರಿಯಲ್ಲಿ ಹೆಚ್ಚಾಗಲಿದೆ. ₹ 10 ಇದ್ದಿದ್ದು ₹ 12, ₹ 20 ಇದ್ದಿದ್ದು ₹ 23, ₹ 25 ಇದ್ದಿದ್ದು ₹ 28, ₹ 30 ಇದ್ದಿದ್ದು ₹ 32 ಆಗಲಿದೆ.

ಕೆಎಸ್‌ಆರ್‌ಟಿಸಿ, ವಾಯವ್ಯ ಕರ್ನಾಟಕ ಎಸ್‌ಆರ್‌ಟಿಸಿ (ಎನ್‌ಡಬ್ಲ್ಯುಆರ್‌ಟಿಸಿ), ಕಲ್ಯಾಣ ಕರ್ನಾಟಕ ಎಸ್‌ಆರ್‌ಟಿಸಿ (ಕೆಕೆಆರ್‌ಟಿಸಿ) ಬಸ್‌ಗಳಲ್ಲಿ ವಿವಿಧ ಜಿಲ್ಲಾ ಕೇಂದ್ರಗಳಿಗೆ ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಕನಿಷ್ಠ ₹ 11 (ಹತ್ತಿರದ ಜಿಲ್ಲೆ), ಗರಿಷ್ಠ ₹ 115ರವರೆಗೆ (ದೂರದ ಜಿಲ್ಲೆ) ಹೆಚ್ಚಳವಾಗಲಿದೆ. ಇದೇ ಮಾದರಿಯಲ್ಲಿ ಪ್ರತಿಷ್ಠಿತ ಬಸ್‌ಗಳಲ್ಲಿ ಅವುಗಳ ಈಗಿನ ದರದಲ್ಲಿ ಶೇ 15 ಹೆಚ್ಚಳವಾಗಲಿದೆ.

ನಾಲ್ಕು ನಿಗಮಗಳಲ್ಲಿ ತಿಂಗಳ ವರಮಾನವು ₹ 1,052 ಕೋಟಿ ಇದ್ದು, ಬೆಲೆ ಏರಿಕೆಯಾದ ಬಳಿಕ ಪ್ರತಿ ತಿಂಗಳು ಹೆಚ್ಚುವರಿಯಾಗಿ ₹ 74.85 ಕೋಟಿ ಸಂಗ್ರಹವಾಗಲಿದೆ.

ಐಷಾರಾಮಿ ಬಸ್‌ಗಳಿಗೂ ಅನ್ವಯ
ಸಾಮಾನ್ಯ ವೇಗದೂತ ಬಸ್‌ಗಳ ಟಿಕೆಟ್‌ ದರ ಏರಿಕೆಯನ್ನು ಸರ್ಕಾರ ನಿರ್ಧರಿಸುತ್ತದೆ. ಪ್ರತಿಷ್ಠಿತ ಬಸ್‌ಗಳ ದರ ಏರಿಕೆಯನ್ನು ನಿಗಮಗಳ ಮಟ್ಟದಲ್ಲಿಯೇ ನಿರ್ಧಾರವಾಗುತ್ತದೆ. ಆದರೂ ಶೇ 15 ಬೆಲೆ ಏರಿಕೆ ಎಲ್ಲ ಬಸ್‌ಗಳಿಗೂ ಅನ್ವಯವಾಗಲಿದೆ. ‘ಐಷಾರಾಮಿ ಬಸ್‌ಗಳ ಟಿಕೆಟ್‌ ದರವನ್ನು ಹೆಚ್ಚಿಸದೇ ಐದು ವರ್ಷಗಳಾಗಿವೆ. ಹಾಗಾಗಿ ಅವುಗಳ ದರಗಳು ಸಾಮಾನ್ಯ ಬಸ್‌ಗಳ ಜೊತೆಗೇ ಆಗಲಿವೆ’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್‌ ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆವಿದ್ಯಾರ್ಥಿಗಳು ಗಣಕೀಕೃತ ಗ್ರಂಥಾಲಯ ಸದುಪಯೋಗ ಪಡಿಸಿಕೊಳ್ಳಬೇಕು: ಡಾ.ಪ್ರವೀಣ ಹುಲ್ಲೋಳಿಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?ಪ್ರಧಾನಿ ನಿವಾಸದಲ್ಲಿ ಬಿಜೆಪಿ ಉನ್ನತ ನಾಯಕರ ಸಭೆ: ಸಂಪುಟ ಪುನಾರಚನೆ ಕುತೂಹಲಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿ