Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಂಕಿ ಬಿಸಿಲು : ಕರುನಾಡಲ್ಲಿ ಈ ವರ್ಷ ಬಿಸಿಲು ಹೆಚ್ಚು

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಅವಧಿಯಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಈಗಾಗಲೇ ವಾಡಿಕೆಗಿಂತ ಅಧಿಕವಾಗಿದೆ ಎಂದು ವರದಿಯಾಗುತ್ತಿದೆ. ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದ್ದರೆ, ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಕೆಲವೆಡೆ ವಾಡಿಕೆಗಿಂತ 3 ಡಿಗ್ರಿ ಸೆಲ್ಸಿಯಸ್‌ವರೆಗೂ ಹೆಚ್ಚು ವರದಿಯಾಗುತ್ತಿದೆ.

ಜಾಗತಿಕ ತಾಪಮಾನ ಏರಿಕೆ, ತೇವಾಂಶ ಕೊರತೆ, ಶುಭ್ರ ಆಕಾಶ, ‘ಲಾ ನಿನಾ’ ಪರಿಣಾಮ (ಉಷ್ಣವಲಯದ ಫೆಸಿಫಿಕ್​ ಸಾಗರದಲ್ಲಿ ಮೇಲ್ಮೈ ತಾಪಮಾನ ತಂಪಾಗಿರುವುದು) ಸೇರಿ ವಿವಿಧ ಕಾರಣಗಳಿಂದ ಏಪ್ರಿಲ್ ಮತ್ತು ಮೇಯಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 4-5 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ವಿಶ್ಲೇಷಿಸಿದೆ.

‘ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬಳ್ಳಾರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್–ಮೇ ತಿಂಗಳು ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್‌ನಿಂದ 45 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿಯೂ ಉಷ್ಣಾಂಶ ಹೆಚ್ಚಳವಾಗುವ ಸಂಭವವಿದ್ದು, 39 ಡಿಗ್ರಿ ಸೆಲ್ಸಿಯಸ್‌ ತಲುಪಬಹುದು’ ಎಂದು ಇಲಾಖೆಯ ಹವಾಮಾನ ತಜ್ಞ ಸಿ.ಎಸ್. ಪಾಟೀಲ ತಿಳಿಸಿದರು.

‘ಬೇಸಿಗೆಯಲ್ಲಿ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ನೀರನ್ನು ಆಗಾಗ ಕುಡಿಯಬೇಕು. ಸಡಿಲವಾದ ತೆಳ್ಳನೆ ಬಟ್ಟೆಯನ್ನು ಧರಿಸಬೇಕು. ಚಹಾ–ಕಾಫಿ ಬದಲು, ತಂಪು ಪಾನೀಯ ಸೇವಿಸಬೇಕು’ ಎಂದು ಸಲಹೆ ನೀಡಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?