Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

RCB ಸ್ಥಾಪಿಸುವುದಾಗಿ ಘೋಷಣೆ ಮಾಡಿದ ಮಾಜಿ ಉಪ ಮುಖ್ಯಮಂತ್ರಿ, !

ವಿಜಯಪುರ : ರಾಯಣ್ಣ, ಚನ್ನಮ್ಮ ಬ್ರಿಗೇಡ್(RCB)ಅಸ್ತಿತ್ವಕ್ಕೆ ತರುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಇಂದು ವಿಜಯಪುರದಲ್ಲಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ದಿಸೆಯಲ್ಲಿ ಶೀಘ್ರವೇ ರಾಯಣ್ಣ, ಚನ್ನಮ್ಮ ಬ್ರಿಗೇಡ್ ಅಸ್ತಿತ್ವಕ್ಕೆ ಬರಲಿದೆ ಎಂದು ಘೋಷಣೆ ಮಾಡಿದ್ದಾರೆ. ಹಿಂದುಳಿದವರಿಗೆ ಅನ್ಯಾಯ ತಡೆಯಲು ಬ್ರಿಗೇಡ್ ಬೇಕು ಎಂದು ಹಲವರು ಅಪೇಕ್ಷಿಸಿದ್ದಾರೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ ಯತ್ನಾಳ ಸೇರಿ ಆರ್‌ಸಿಬಿ ಸ್ಥಾಪಿಸುವಂತೆ ಸಲಹೆ ನೀಡಿದ್ದಾರೆ. ಈ ಕುರಿತು ಚರ್ಚಿಸಿ ತೀರ್ಮಾನಿಸಲಾಗುವುದು. ಈ ಹಿಂದೆ ರಾಯಣ್ಣ ಬ್ರಿಗೇಡ್ ಚಟುವಟಿಕೆ ನಿಲ್ಲಿಸುವಂತೆ ಯಡಿಯೂರಪ್ಪ ದೂರಿನಂತೆ ಅಮಿತ್ ಶಾ ನನಗೆ ಸೂಚಿಸಿದ್ದರಿಂದ ಅದನ್ನು ಕೈ ಬಿಟ್ಟಿದ್ದೆ. ಅಂದು ರಾಯಣ್ಣ ಬ್ರಿಗೇಡ್ ಕೈಬಿಟ್ಟು ತಪ್ಪು ಮಾಡಿದೆ ಅನಿಸುತ್ತದೆ ಎಂದು ಹೇಳಿದರು.

ಬಿಜೆಪಿ ನನ್ನ ಪಾಲಿನ ತಾಯಿ ಇದ್ದಂತೆ. ಆ ಪಕ್ಷ ಬಿಟ್ಟು ಬೇರೆ ಯಾವ ಪಕ್ಷಕ್ಕೂ ಈ ಜೀವನದಲ್ಲಿ ಹೋಗುವುದಿಲ್ಲ. ಆದರೆ ಭ್ರಷ್ಟಾಚಾರಿಗಳು ಅಪ್ಪ-ಮಕ್ಕಳ ಕಪಿಮುಷ್ಟಿಯಿಂದ ಶುದ್ಧೀಕರಣವಾಗದ ವಿನಾ ಬಿಜೆಪಿಗೆ ಸದ್ಯಕ್ಕೆ ಹೋಗಲ್ಲ. ಬಿಜೆಪಿ ತಾಯಿಯಂತಿದ್ದು ಆ ತಾಯಿಯ ಮೇಲೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಧ್ವನಿ ಎತ್ತಿ ಹೊರಬಂದಿರುವೆ. ಶುದ್ಧೀಕರಣಕ್ಕೆ ಪಕ್ಷದ ಹಿರಿಯರು ಗಮನಹರಿಸುತ್ತಾರೆ ಎಂಬ ನಂಬಿಕೆ ಇದೆ. ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬೆರೆಸುವ ಮೂಲಕ ಹಿಂದುಗಳಿಗೆ ಭಾವನೆಗೆ ಧಕ್ಕೆ ತರಲಾಗಿದೆ. ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ