Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೃತರ ಕುಟುಂಬದ ನೆರವಿಗೆ ಧಾವಿಸಿ, ಧೈರ್ಯ ತುಂಬಿದ ಸಚಿವೆ ಹೆಬ್ಬಾಳಕರ್ ಪುತ್ರ-ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿ; ಮೃತದೇಹಗಳನ್ನು ಬೆಳಗಾವಿಗೆ ತರಲು ವ್ಯವಸ್ಥೆ

 

ಬೆಳಗಾವಿ: ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ ನಾಲ್ವರು ಅಪಘಾತಕ್ಕೆ ಬಲಿಯಾಗಿರುವ ಸುದ್ದಿ ತಿಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಗಣೇಶಪುರಕ್ಕೆ ಧಾವಿಸಿ ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
ಮೃತದೇಹಗಳನ್ನು ತರುವುದು ಸೇರಿದಂತೆ ಕುಟುಂಬಸ್ಥರಿಗೆ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸುಮಾರು 50 ಜನ ಪ್ರಯಾಗ್‌ರಾಜ್ ಮಹಾಕುಂಭ ಮೇಳಕ್ಕೆ ತೆರಳಿದ್ದರು. ಈ ಪೈಕಿ ಒಂದು ವಾಹನ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 16 ಮಂದಿಗೆ ಗಾಯಗಳಾಗಿವೆ. ಸ್ಥಳೀಯರ ಮೂಲಕ ಕ್ಷೇತ್ರದ ಶಾಸಕರು ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ವಿಷಯ ತಿಳಿಯಿತು. ಇದೀಗ ಸಚಿವರ ಸೂಚನೆಗೆ ಮೇರೆಗೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿರುವೆ ಎಂದು ಮೃಣಾಲ್ ಹೆಬ್ಬಾಳಕರ್ ಹೇಳಿದರು.

ಮಧ್ಯಪ್ರದೇಶದ ಇಂದೋರ್ ಆಸ್ಪತ್ರೆಯಲ್ಲಿ ಮೃತದೇಹಗಳಿದ್ದು, ಬೆಳಗಾವಿಗೆ ಮೃತದೇಹಗಳನ್ನು ತರುವ ವ್ಯವಸ್ಥೆ ಮಾಡಬೇಕು ಎಂದು ಸಚಿವರು ನಮಗೆ ಆದೇಶ ಮಾಡಿದ್ದಾರೆ. ಕುಟುಂಬಸ್ಥರು, ಬೆಳಗಾವಿ ಜಿಲ್ಲಾಡಳಿತ ಹಾಗೂ ಇಂದೋರ್ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿ ಮೃತ ದೇಹಗಳನ್ನು ತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಒಂದು ಮೃತ ದೇಹವನ್ನು ಇಂದೋರ್‌ನಿಂದ ಬೆಳಗಾವಿಗೆ ತರಲು ಸುಮಾರು 95 ಸಾವಿರ ರೂಪಾಯಿ ಖರ್ಚಾಗಲಿದೆ. ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ನೆರವು ನೀಡಲಾಗುವುದು ಎಂದು ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಹೇಳಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?