Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಎಂ ರಾಜಕೀಯ ಕಾರ್ಯದರ್ಶಿಗೆ ಗೇಟ್‌ಪಾಸ್‌-ಗುಪ್ತಚರ ಇಲಾಖೆ ADGP ಹೇಮಂತ್‌ ನಿಂಬಾಳ್ಕರ್ ಎತ್ತಂಗಡಿ

ಬೆಂಗಳೂರು: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್‌ ಅವರಿಗೆ ಗೇಟ್‌ಪಾಸ್‌ ನೀಡಲಾಗಿದೆ. ಹುದ್ದೆಯಿಂದ ತಕ್ಷಣವೇ ಬಿಡುಗಡೆ ಮಾಡಿ ಆದೇಶ ಮಾಡಲಾಗಿದೆ. ಜತೆಗೆ ಕರ್ನಾಟಕ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್‌ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

18 ನೇ ಐಪಿಎಲ್‌ ಟೂರ್ನಿ ಕಪ್‌ ಗೆದ್ದಿದ್ದ ಆರ್‌ಸಿಬಿ ತಂಡವು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ವಿಜಯೋತ್ಸವ ಹಮ್ಮಿಕೊಂಡಾಗ ಕಾಲ್ತುಳಿತವಾಗಿ 11 ಮಂದಿ ಮೃತಪಟ್ಟು, 47 ಮಂದಿ ಗಾಯಾಳುಗಳಾಗಿದ್ದವು. ಈ ಘಟನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಗುರುವಾರ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಪೊಲೀಸ್‌ ಇಲಾಖೆಯ ಹಲವರನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೆ ಈಗ ಸಿಎಂ ರಾಜಕೀಯ ಕಾರ್ಯದರ್ಶಿ, ಗುಪ್ತಚರ ಇಲಾಖೆ ಮುಖ್ಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
2023 ಚುನಾವಣೆ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಾಗಿನಿಂದ ರಾಜಕೀಯ ಕಾರ್ಯದರ್ಶಿಯಾಗಿ ಗೋವಿಂದರಾಜ್‌ ಜತೆಗಿದ್ದರು. ಮಾತ್ರವಲ್ಲದೇ, ಸಿಎಂನ ರಾಜಕೀಯ ಚಟುವಟಿಕೆಗಳನ್ನು ನಿಗಾವಹಿಸುತ್ತಿದ್ದರು. ಇವರಿಗೆ ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ನೀಡಲಾಗಿತ್ತು. ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಂತಹ ದುರ್ಘಟನೆ ನಡೆದಿದ್ದು ಇದಕ್ಕೆ ಸರ್ಕಾರವೇ ಹೊಣೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಸಿಎಂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದು, ರಾಜಕೀಯ ಕಾರ್ಯದರ್ಶಿ ಬದಲಾವಣೆ ಮುಂದಾಗಿದ್ದಾರೆ. ಸದ್ಯ ಕಾರ್ಯದರ್ಶಿ ಸ್ಥಾನದಿಂದ ಗೋವಿಂದರಾಜ್‌ ಬಿಡುಗಡೆಯಾಗಿದ್ದು, ಈ ಸ್ಥಾನಕ್ಕೆ ಯಾರು ನೇಮಕವಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಗುಪ್ತಚರ ಇಲಾಖೆ ಲೋಪ ಎಂಬ ಆರೋಪ: ಇನ್ನು ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತಕ್ಕೆ ಗುಪ್ತಚರ ಇಲಾಖೆಯ ವೈಫಲ್ಯವು ಕಾರಣ ಎಂಬ ಆರೋಪ ಕೇಳಿಬಂದಿತ್ತು. ಆರ್‌ಸಿಬಿ ಅಭಿನಂದನಾ ಸಮಾರಂಭ, ವಿಜಯಯಾತ್ರೆಗೆ ಒಮ್ಮೆಗೆ ಇಷ್ಟೊಂದು ಜನ ಆಗಮಿಸುತ್ತಾರೆ ಎಂಬ ಯಾವ ಸುಳಿವನ್ನು ಗುಪ್ತಚರ ಇಲಾಖೆಯು ಸರ್ಕಾರಕ್ಕೆ ಅಥವಾ ಪೊಲೀಸ್‌ ಇಲಾಖೆಗೆ ನೀಡಿಲ್ಲ. ಹೀಗಾಗಿ, ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್‌ ನಿಂಬಾಳ್ಕರ್ ಅವರ ವಿರುದ್ಧ ಕ್ರಮಕೈಗೊಂಡ ಸರ್ಕಾರ ವರ್ಗಾವಣೆ ಅಸ್ತ್ರ ಪ್ರಯೋಗಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ