Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರತದ ನೂತನ ಸಿಡಿಎಸ್ ಆಗಿ ಜನರಲ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ ನೂತನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಭಾನುವಾರ (ಮೇ 31) ಅಧಿಕಾರ ವಹಿಸಿಕೊಂಡಿದ್ದಾರೆ. ಮೂರೂ ಸೇನಾ ಪಡೆಗಳ ನಡುವೆ ಸಮನ್ವಯತೆಯನ್ನು ಬಲಪಡಿಸುವುದು ಮತ್ತು ಮಿಲಿಟರಿ ಥಿಯೇಟರ್ ಕಮಾಂಡ್ ಯೋಜನೆ ಜಾರಿಗೆ ತರುವುದು ಅವರ ಪ್ರಮುಖ ಆದ್ಯತೆಗಳಾಗಿವೆ.
ಜನರಲ್ ಸುಬ್ರಮಣಿ ಅವರ ಬಗ್ಗೆ…
ಪಾಕಿಸ್ತಾನ ಮತ್ತು ಚೀನಾ ವಿಷಯಗಳಲ್ಲಿ ರಕ್ಷಣಾ ತಜ್ಞರೆಂದು ಹೆಸರಾಗಿರುವ ಜನರಲ್ ಸುಬ್ರಮಣಿ ಅವರು, ಸಿಡಿಎಸ್ ಆಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ (NSCS) ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಉಪ ಮುಖ್ಯಸ್ಥರಾಗಿ (ವೈಸ್ ಚೀಫ್ ಆಫ್ ಆರ್ಮಿ ಸ್ಟಾಫ್) ನಿವೃತ್ತರಾಗಿದ್ದರು.

ಸಿಡಿಎಸ್ ಆಗಿ ಜನರಲ್ ಸುಬ್ರಮಣಿ ಅವರ ಪ್ರಾಥಮಿಕ ಜವಾಬ್ದಾರಿಯು, ಮೂರೂ ಸೇವೆಗಳ ನಡುವೆ ಜಂಟಿ ಕಾರ್ಯಾಚರಣೆಯನ್ನು ‘ಸಮಗ್ರ ಥಿಯೇಟರ್ ಕಮಾಂಡ್’ಗಳ ರಚನೆ ಮತ್ತು ಅನುಷ್ಠಾನದ ಮೂಲಕ ಮಿಲಿಟರಿ ಥಿಯೇಟರೈಸೇಶನ್ ಯೋಜನೆಯನ್ನು ಮುನ್ನಡೆಸುವುದಾಗಿದೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ತಮ್ಮ ಸುದೀರ್ಘ ಮತ್ತು ಮಿಲಿಟರಿ ವೃತ್ತಿಜೀವನದಲ್ಲಿ, ಅವರು ವ್ಯಾಪಕ ಶ್ರೇಣಿಯಯಲ್ಲಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಹಲವು ಪ್ರಮುಖ ಕಮಾಂಡ್, ಸ್ಟಾಫ್ ಮತ್ತು ತರಬೇತಿ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ಜುಲೈ 1, 2024 ರಿಂದ ಜುಲೈ 31, 2025 ರವರೆಗೆ ಸೇನಾ ಉಪ ಮುಖ್ಯಸ್ಥರಾಗಿ ಮತ್ತು ಅದಕ್ಕೂ ಮುನ್ನ ಮಾರ್ಚ್ 2023 ರಿಂದ ಜೂನ್ 2024 ರವರೆಗೆ ಸೆಂಟ್ರಲ್ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ