Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32 ಕ್ಕೆ ಏರಿಕೆ

 

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ ನಗರದಲ್ಲಿರುವ ಗೇಮಿಂಗ್‌ ಜೋನ್‌ ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 32 ಮಂದಿ ಮೃತಪಟ್ಟಿರುವ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. ಇನ್ನೂ ಹಲವು ಜನ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದ್ದಾರೆ. ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ. ಅಗ್ನಿಯನ್ನು ನಂದಿಸಲು ಸಿಬ್ಬಂದಿಯು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದಾಗ್ಯೂ, ಬೆಂಕಿಯಲ್ಲಿ ಎಷ್ಟು ಜನ ಸಿಲುಕಿದ್ದಾರೆ? ಇನ್ನೂ ಎಷ್ಟು ಜನ ಕಾಣೆಯಾಗಿದ್ದಾರೆ ಎಂಬುದರ ಕುರಿತು ನಿಖರ ಮಾಹಿತಿ ದೊರೆತಿಲ್ಲ.

ಎರಡು ಅಂತಸ್ತಿನ ಶೆಡ್‌ನಲ್ಲಿ ನಿರ್ಮಿಸಲಾಗಿದ್ದ ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಸಿಕ್ಕಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ರಾಜ್‌ಕೋಟ್‌ ಮೇಯರ್‌ ನಯನಾ ಪೆಢಾದಿಯಾ ಅವರೇ ಮಾಹಿತಿ ನೀಡಿದ್ದಾರೆ. “ನೋ ಅಬ್ಜೆಕ್ಷನ್‌ ಸರ್ಟಿಫಿಕೇಟ್‌ ಇಲ್ಲದೆಯೇ ಗೇಮಿಂಗ್‌ ಜೋನ್‌ ಕಾರ್ಯನಿರ್ವಹಿಸುತ್ತಿದ್ದ ಕುರಿತು ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ನುಸುಳದಂತೆ ತನಿಖೆ ನಡೆಸಲಾಗುತ್ತದೆ. ಇದು ಸಣ್ಣ ಸಂಗತಿ ಅಲ್ಲ” ಎಂಬುದಾಗಿ ಮಾಹಿತಿ ನೀಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ