Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವೈದ್ಯರ ಮೇಲೆ ಹಲ್ಲೆ ಎಸಗಿದರೆ ಇನ್ಮುಂದೆ ಕಠಿಣ ಶಿಕ್ಷೆ

ಬೆಂಗಳೂರು: ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನಪರಿಷತ್‌ನಲ್ಲಿ ಅಂಗೀಕಾರ ಸಿಕ್ಕಿತ್ತು. ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಈ ಕಾಯ್ದೆ ಪ್ರಕಾರ ಉದ್ದೇಶಪೂರ್ವಕವಾಗಿ ವೈದರ ಮೇಲೆ ಹಲ್ಲೆ, ನಿಂದನೆ, ಅವಮಾನಿಸುವುದನ್ನು ನಿಷೇಧಿಸಲಾಗಿದೆ. ವೈದ್ಯರ ಮೇಲಿನ ಹಲ್ಲೆಗೆ 3 ವರ್ಷದಿಂದ 7 ವರ್ಷದ ತನಕ ಜೈಲು ಶಿಕ್ಷೆ ಹಾಗೂ 25 ಸಾವಿರದಿಂದ 2 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಇನ್ನು ನಕಲಿ ವೈದ್ಯರ ಮೇಲಿನ ದಂಡ 10 ಸಾವಿರದಿಂದ 1 ಲಕ್ಷದವರೆಗೆ ಏರಿಕೆ ಮಾಡಲಾಗಿದೆ.

ವೈದ್ಯಕೀಯ ಪರಿಷತ್‌ನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಹೊರತುಪಡಿಸಿ ಇತರೆ ಸದಸ್ಯರು, ನಾಮನಿರ್ದೇಶಿತರ ಅವಧಿಯನ್ನು 5 ವರ್ಷಕ್ಕೆ ನಿಗದಿಪಡಿಸಲಾಗಿದೆ. ಎರಡು ಅವಧಿಗೆ ಅಧ್ಯಕ್ಷ ಅಥವಾ ಉಪಾಧ್ಯಕ್ಷರಾಗಿದ್ದವರು ಮತ್ತೆ ಅದೇ ಸ್ಥಾನಕ್ಕೆ ಚುನಾಯಿತರಾಗಲು ಅವಕಾಶವಿರುವುದಿಲ್ಲ. ಪರಿಷತ್‌ಗೆ 3 ವರ್ಷಗಳ ಅವಧಿಗೆ ಒಬ್ಬ ರಿಜಿಸ್ಟ್ರಾರ್‌ ಮತ್ತು ಉಪ ರಿಜಿಸ್ಟ್ರಾರ್‌ ನೇಮಕ ಮಾಡಲಾಗುತ್ತದೆ.

ಈ ಕಾಯ್ದೆ ಪ್ರಕಾರ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ, ವೈದ್ಯಕೀಯ ಪರಿಷತ್ತಿನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಒಂದು ವೇಳೆ ನೋಂದಣಿಯಾಗದೆ ವೃತ್ತಿ ಅಭ್ಯಾಸ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಪರಿಷತ್‌ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರಿಷತ್ತಿನಲ್ಲಿ ನೋಂದಣಿಯಾಗದವರು ವೈದ್ಯ ವೃತ್ತಿ ನಿರ್ವಹಿಸುವಂತಿಲ್ಲ. ನಕಲಿ ವೈದ್ಯರ ವಿರುದ್ಧ ಪರಿಷತ್‌ ಸ್ವಯಂಪ್ರೇರಣೆಯಿಂದ ದೂರು ಸಲ್ಲಿಸಬಹುದಾಗಿದೆ.

ವೈದ್ಯಕೀಯ ಪರಿಷತ್ತಿಗೆ ರಿಜಿಸ್ಟರ್‌ ಹಾಗೂ ಉಪ ರಿಜಿಸ್ಟರ್‌ಗಳನ್ನು ನೇಮಕ ಮಾಡುವ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗಿದೆ. ಪರಿಷತ್ತಿಗೆ ಸಭೆ ನಡೆಸುವ ವೇಳೆ, ಸ್ಥಳ ಹಾಗೂ ಕಾರ್ಯವಿಧಾನಗಳ ಬಗ್ಗೆಯೂ ವಿವರಿಸಲಾಗಿದೆ. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು, ಒಂದು ವೇಳೆ ಇಬ್ಬರು ಲಭ್ಯವಿಲ್ಲದ ಸಂದರ್ಭದಲ್ಲಿ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಬಹುದು ಎಂದು ತಿಳಿಸಲಾಗಿದೆ. ಪರಿಷತ್ತಿನ ರಿಜಿಸ್ಟ್ರಾರ್‌ ಅವರು ವೈದ್ಯಕೀಯ ವೃತ್ತಿಗರ ಪಟ್ಟಿಯನ್ನು ಪ್ರತಿದಿನ ಅಧಿಕೃತ ಜಾಲತಾಣದಲ್ಲಿ ನಿರ್ವಹಿಸಬೇಕು ಮತ್ತು ರಾಷ್ಟ್ರೀಯ ಆಯೋಗಕ್ಕೆ ತಿಳಿಸಬೇಕು ಎಂದು ಸೂಚಿಸಲಾಗಿದೆ.

ಇನ್ನು ಮುಂದೆ ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ, ಆಡಿಯೊ-ವಿಡಿಯೊಗಳಲ್ಲಿ, ಆಸ್ಪತ್ರೆಗಳಲ್ಲಾಗಲಿ ಫೋಟೊ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅಂತಹ ಕೃತ್ಯಗಳು ದಂಡನಾರ್ಹವಾಗಲಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ