Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರೀ ಬೆಳವಣಿಗೆ : ಮುನಿಸು ಮರೆತು ಸುಮಲತಾ ಭೇಟಿಯಾದ ಎಚ್‌ಡಿಕೆ

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೊನೆಗೂ ಮುನಿಸು ಮರೆತು ಸಂಸದೆ ಸುಮಲತಾ ಅವರನ್ನು ಭೇಟಿಯಾಗಿದ್ದು, ಊಹಾ-ಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಸುಮಲತಾರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿರುವ ಸುಮಲತಾರ ನಿವಾಸಕ್ಕೆ ಭೇಟಿ ನೀಡುತ್ತಿದ್ದಂತೆ ಪುತ್ರ ಅಭಿಷೇಕ್ ಮತ್ತು ಚಲನಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು. ಬಳಿಕ ಸುಮಲತಾ ಅವರು ಹೆಚ್‌ಡಿಕೆ ಅವರನ್ನು ಸ್ವಾಗತಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಬದಲಾದ ರಾಜಕೀಯದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಸುಮಲತಾರೊಂದಿಗೆ ಮಾತುಕತೆ ನಡೆಸಿದ್ದಾರೆ.

ಶನಿವಾರವಷ್ಟೇ ಸಂಸದೆ ಸುಮಲತಾ ಅಂಬರೀಷ್‌ ಬೆಂಗಳೂರಿನ ನಿವಾಸದಲ್ಲಿ ತಮ್ಮ ಬೆಂಬಲಿಗರ ಸಭೆ ನಡೆಸಿದ್ದರು. ಸಭೆಯಲ್ಲಿ ಬೆಂಬಲಿಗರು ಪಕ್ಷೇತರವಾಗಿ ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಿದ್ದರು. ಇದಕ್ಕೆ ಸುಮಲತಾ ಅಂಬರೀಶ್ ನಾನು ನಿಮ್ಮ ಆಸೆಗೆ ವಿರುದ್ಧ ಹೋಗಲ್ಲ. ಯೋಚನೆ ಮಾಡಿ ಏ.3ರಂದು ಮಂಡ್ಯದಲ್ಲಿ ಸಭೆ ಮಾಡಿ ನನ್ನ ನಿರ್ಧಾರ ಹೇಳುತ್ತೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಅವರು ಸುಮಲತಾ ನಿವಾಸಕ್ಕೆ ತೆರಳಿ ತಮ್ಮ ಸ್ಪರ್ಧೆಗೆ ಬೆಂಬಲ ಕೋರಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ