Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು (ಆಗಸ್ಟ್‌ 7) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್‌ 7ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ಕೆಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ ವೇಳೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ನದಿ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳು ಹಾಗೂ ಮಲೆನಾಡಿನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರ್ದಿಷ್ಟ ಪ್ರದೇಶದಲ್ಲಿ ಜೋರಾಗಿ ಮಳೆಯಾಗಬಹುದು.
ಉತ್ತರ ಒಳನಾಡಿನ ಧಾರವಾಡ, ಹಾವೇರಿ, ರಾಯಚೂರು, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ತುಂತುರು ಮಳೆಯೂ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ