Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭಾರೀ ಮಳೆ ಮುನ್ಸೂಚನೆ : ಕರ್ನಾಟಕದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಕ್ಕೆ ಭಾನುವಾರ ಮುಂಗಾರು ಪ್ರವೇಶವಾಗಿದೆ. ಹೀಗಾಗಿ, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಸೋಮವಾರ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆಗಳಿಗೆ (ಜೂನ್‌ 3 )ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಮುಂತಾದ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸಲಿದೆ.

ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ