Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದು ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ಧಾರಾಕಾರವಾಗಿ ಮಳೆ ಸುರಿದಿತ್ತು.  ಇಂದೂ ಸಹ ಬೆಳಗಾವಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ (ಅಕ್ಟೋಬರ್‌ 9) ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಚಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್‌ 10ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷೀನ ಒಳನಾಡು ಜಿಲ್ಲೆಗಳ ಹಲವು ಕಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅಕ್ಟೋಬರ್‌ 11ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?