Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೇಹಾ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಹೆಬ್ಬಾಳ್ಕರ್

ಬೆಳಗಾವಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಮಗಳ ಹತ್ಯೆಯ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಮಗಳನ್ನು ಕಳೆದುಕೊಂಡು, ನೋವಿನಲ್ಲಿರುವ ತಂದೆ-ತಾಯಿಗೆ ಭಗವಂತ ನೋವು ಸಹಿಸುವ ಶಕ್ತಿ‌ ನೀಡಲಿ ಎಂದು ಪ್ರಾರ್ಥಿಸಿದರು.

 

ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನೇಹಾ ಪಾಲಕರು ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ‌. ದೊಡ್ಡ ಸಮಾಜ ನಾವೆಲ್ಲಾ ಜೊತೆಯಲ್ಲಿ ಇರ್ತೀವಿ ಅಂತ ಹೇಳಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದರು ‌

ಇಂಥ ಘಟನೆ ನಡೆಯಬಾರದಿತ್ತು. ಇದನ್ನು ಕಠಿಣ‌ ಶಬ್ದದಿಂದ ಖಂಡಿಸುತ್ತೇನೆ. ಪ್ರಕರಣದ ತನಿಖೆ ಬಗ್ಗೆ ಯಾರಿಗೂ, ಯಾವುದೇ ಸಂಶಯ ಬೇಡ. ತನಿಖೆ ನಡೆಯಲಿದ್ದು, ನಾನೊಬ್ಬ ತಾಯಿಯಾಗಿ ಘಟನೆಯನ್ನು ಖಂಡಿಸುತ್ತೇನೆ ಎಂದು ಸಚಿವರು ಹೇಳಿದರು. ಇಂತಹ ಸಂದರ್ಭದಲ್ಲಿ‌ ಸಾಂತ್ವನ, ಸಮಾಧಾನ ಹೇಳಿದರೆ ಸಾಲದು. ಈ ವೇಳೆ ಯಾವುದೇ ರಾಜಕೀಯ ಮಾತುಗಳ ಬೇಡ ಎಂದು ಪತ್ರಕರ್ತರಲ್ಲಿ ಮನವಿ ಮಾಡಿದರು.

ಬೇರೆ ಯಾವ ವಿಷಯದ ಬಗ್ಗೆಯೂ ಮಾತನಾಡುವ ಸಂದರ್ಭ‌ ಇದಲ್ಲ. ಆ ಹೆಣ್ಣು ಮಗಳಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಇದೆ. ನಿರಂಜನ್ ಹಿರೇಮಠ ಅವರು ನಮ್ಮ ಪಕ್ಷದ ಕಾರ್ಪೊರೇಟರ್. ಅವರ ಜೊತೆಗೆ ನಾವಿದ್ದೇವೆ. ಅವರ ಮಗಳಿಗೆ ಸೂಕ್ತ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಹುಬ್ಬಳ್ಳಿ ಪೊಲೀಸ್ ಆಯುಕ್ತರಾದ ರೇಣುಕಾ ಶಶಿಕುಮಾರ್, ಯುವ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ, ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಸುವರ್ಣ ಕಲ್ಲಕುಂಟ್ಲ, ಮೋಹನ್ ಲಿಂಬಿಕಾಯಿ, ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

 

 
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರು