Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಕ್ಷದ ಶಿಸ್ತು ಉಲ್ಲಂಘನೆ ಆರೋಪ: ಹೆಬ್ಬಾ‌ರ್, ಸೋಮಶೇಖರ್‌ಗೆ ಕಾರಣ ಕೇಳಿ ನೋಟಿಸ್‌

ನವದೆಹಲಿ: ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಚರ್ಚಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಆರೋಪಿಸಿರುವ ಭಾರತೀಯ ಜನತಾ ಪಕ್ಷದ ಕೇಂದ್ರ ಶಿಸ್ತು ಸಮಿತಿಯು, ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್‌.ಟಿ. ಸೋಮಶೇಖರ್ ಅವರಿಗೆ ಕಾರಣ ಕೇಳಿ ಮಂಗಳವಾರ ನೋಟಿಸ್‌ ಜಾರಿ ಮಾಡಿದೆ.

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ನೋಟಿಸ್ ಜಾರಿ ಮಾಡಿದ್ದು, 'ಪಕ್ಷದ ನಿಯಮ ಉಲ್ಲಂಘಿಸಿರುವ ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಜರುಗಿಸಬಾರದು ಎಂಬುದನ್ನು ನೋಟಿಸ್‌ ತಲುಪಿದ 72 ಗಂಟೆಯೊಳಗೆ ಉತ್ತರಿಸಬೇಕು. ಕಾಲಮಿತಿಯೊಳಗೆ ಉತ್ತರಿಸದಿದ್ದಲ್ಲಿ, ಹೇಳಲು ಏನೂ ಇಲ್ಲವೆಂದು ಭಾವಿಸಿ ಶಿಸ್ತು ಕ್ರಮ ಜರುಗಿಸಲಾಗುವುದು' ಎಂದಿದ್ದಾರೆ.

'ರಾಜಕೀಯ ಪಕ್ಷದಲ್ಲಿ ಅಶಿಸ್ತಿಗೆ ಕಾಲಕಾಲಕ್ಕೆ ಔಷಧಿ ನೀಡಬೇಕು. ಆದರೆ, ಈಗ ಬಿಜೆಪಿಯಲ್ಲಿ ಔಷಧಿ ನೀಡುವ ಸಮಯ ಮೀರಿದೆ. ಇಡೀ ಪಕ್ಷ ಅಶಿಸ್ತಿನಿಂದ ಕೂಡಿದೆ. ಈಗ ಬಿಜೆಪಿಯಲ್ಲಿ ನಾಯಕರಿಲ್ಲ, ಪಕ್ಷವಾಗಿಯೂ ಉಳಿದಿಲ್ಲ. ಪಂಗಡಗಳಿಂದ ತುಂಬಿಕೊಂಡಿದೆ' ಎಂದು ಶಿವರಾಮ ಹೆಬ್ಬಾರ ಅವರು ಇತ್ತೀಚೆಗೆ ಹೇಳಿದ್ದರು.

ಇವರಿಗೂ ನೋಟೀಸ್ :
ಪಕ್ಷದ ಅಂತರಿಕ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಿದ್ದಕ್ಕಾಗಿ ರಾಜ್ಯದ ಹಿರಿಯ ನಾಯಕರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಹರಿಹರ ಶಾಸಕ ಬಿ.ಪಿ. ಹರೀಶ ಅವರಿಗೂ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ