Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧ

ನವದೆಹಲಿ: ಔಷಧಗಳ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಕೆಮ್ಮಿನ ಸಿರಪ್ ಸೇರಿದಂತೆ ಎಲ್ಲ ಬಗೆಯ ಸಿರಪ್‌ಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿದ್ದುಪಡಿ ಮಾಡಿದೆ.

ವೈದ್ಯರ ಶಿಫಾರಸು ಇಲ್ಲದೆಯೇ ಈ ಸಿರಪ್‌ಗಳ ಮಾರಾಟವನ್ನು ನಿಷೇಧಿಸುವುದು ಸೇರಿದಂತೆ ಹಲವು ಅಂಶಗಳನ್ನು ತಿದ್ದುಪಡಿ ಒಳಗೊಂಡಿದೆ. ಈ ಮೂಲಕ ಔಷಧಗಳ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಚಿವಾಲಯವು ಈ ತಿದ್ದುಪಡಿ ಕುರಿತಂತೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕರಡು ಅಧಿಸೂಚನೆ ಹೊರಡಿಸಿ, ಎಲ್ಲ ಭಾಗೀದಾರರಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿತ್ತು. ಈಗ, ಈ ಕುರಿತು ಗೆಜೆಟ್‌ನಲ್ಲಿ ಅಧಿಸೂಚನೆ ಪ್ರಕಟಿಸಲಾಗಿದೆ.

ಈ ಮೊದಲಿನ ನಿಯಮಗಳ ಪ್ರಕಾರ, 'ಒಂದು ಸಾವಿರಕ್ಕೂ ಕಡಿಮೆ ಜನಸಂಖ್ಯೆ ಇರುವ ಗ್ರಾಮಗಳಲ್ಲಿನ ಚಿಲ್ಲರೆ ವರ್ತಕರು ಕೆಮ್ಮಿನ ಸಿರಪ್‌ಗಳನ್ನು ಮಾರಾಟ ಮಾಡಬಹುದಿತ್ತು. ಷೆಡ್ಯೂಲ್ ಕೆ(ಕೆಮ್ಮಿನ ಸಿರಪ್ ಸೇರಿ ಕೆಲ ನಿರ್ದಿಷ್ಟ ಔಷಧಗಳ ಮಾರಾಟಕ್ಕೆ ಸಂಬಂಧಿಸಿದ್ದು)
ವ್ಯಾಪ್ತಿಯ ಔಷಧಗಳ ಮಾರಾಟಕ್ಕೆ ಸಂಬಂಧಿಸಿ ನಿಯಮಗಳು ಈ ವರ್ತಕರಿಗೆ ಅನ್ವಯವಾಗುತ್ತಿರಲಿಲ್ಲ. ತಿದ್ದುಪಡಿಯಿಂದಾಗಿ, ಈಗ ಈ ವರ್ತಕರು ಕೆಮ್ಮಿನ ಸಿರಪ್‌ಗಳನ್ನು ಮಾರಾಟ ಮಾಡುವಂತಿಲ್ಲ' ಎಂದು ಸಚಿವಾಲಯ ತಿಳಿಸಿದೆ.

ಸಿರಪ್‌ಗಳ ಗುಣಮಟ್ಟ, ಮಾರಾಟ ನಿಯಮಗಳ ಪಾಲನೆ ಕುರಿತು ಮೇಲ್ವಿಚಾರಣೆ, ಅವುಗಳ ಉತ್ಪಾದಕರಿಂದ ಹಿಡಿದು ಮಾರಾಟಗಾರರ ವರೆಗೆ ಎಲ್ಲ ಹಂತದ ಕಣ್ಣಾವಲು ವ್ಯವಸ್ಥೆಯನ್ನು ಈ ತಿದ್ದುಪಡಿಯು ಬಲಪಡಿಸಲಿದೆ ಎಂದು ಮೂಲಗಳು ಹೇಳಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ಬೆಳಗಾವಿ ಡಿಸಿ ಆಗಿ ಕಾರ್ಯ ನಿರ್ವಹಿಸಿದ್ದ ಜಯರಾಮ್ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಸದಸ್ಯರಾಗಿ ನೇಮಕ ರಾಜ್ಯದಲ್ಲಿ ಎಸ್‌ಐಆರ್ ಅವಧಿ ವಿಸ್ತರಣೆ: ಆ. 8 ರವರೆಗೆ ಗಣತಿ ನಮೂನೆ ವಿತರಣೆನಮ್ಮ ವ್ಯಕ್ತಿತ್ವ ವಿಕಸನಕ್ಕೆ ವಚನಗಳು ದಾರಿದೀಪ: ಪ್ರೊ ಜಯಶ್ರೀ ಅಬ್ಬಿಗೇರಿ ಅಭಿಮತಬಿಡದಿ ಟೌನ್ ಶಿಪ್; ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ ಕೆ ಶಿವಕುಮಾರ್ ಅಭಯನಾಡಗೀತೆಯಲ್ಲಿ ಬೌದ್ಧ ಪದ | ಸೇರ್ಪಡೆಗೆ ತಜ್ಞರ ಶಿಫಾರಸು-ಪಾರಸಿಕ ಜೈನ ಬೌದ್ಧರುದ್ಯಾನ ಎಂದು ಮಾರ್ಪಡಿಸಿ: ಸರ್ಕಾರಕ್ಕೆ ವರದಿಭೋಜಶಾಲಾ–ಕಮಾಲ್ ಮೌಲಾ ಪ್ರಕರಣ: ಶುಕ್ರವಾರದ ನಮಾಜ್‌ಗೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ಕಲ್ಪಿಸಲು ಸುಪ್ರೀಂ ಕೋರ್ಟ್ ನಿರ್ದೇಶನ2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ರಷ್ಯಾವನ್ನು ತಡೆದದ್ದು ಮೋದಿ : ಪೋಲೆಂಡ್ ಸಚಿವರ ಹೇಳಿಕೆಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ