Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿರೇಬಾಗೇವಾಡಿ ಟೋಲ್ ಬಂದ್ ಕರೆ

ಬೆಳಗಾವಿ : ಹಿರೇಬಾಗೇವಾಡಿ ಟೋಲ್‌ ನಾಕಾ (ರಾಷ್ಟ್ರೀಯ ಹೆದ್ದಾರಿ)ವನ್ನು ನ.7ರಂದು ಬಂದ್ ಮಾಡಿ ರಸ್ತೆ ತಡೆ ಮಾಡಲಾಗುವುದು ಎಂದು ರೈತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಒಕ್ಕೊರಲಿನಿಂದ ಹೇಳಿದರು.

ಬೈಲಹೊಂಗಲ ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದ ಆಶ್ವಾರೂಢ ಮೂರ್ತಿ ಎದುರು ಬುಧವಾರ ನಡೆದ 3ನೇ ದಿನದ ಆಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಈ ನಿರ್ಧಾರ ಪ್ರಕಟಿಸಿದರು.

ಬೈಲಹೊಂಗಲದ ರೈತರ ಹೋರಾಟ ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಬರಬೇಕು. ಶೀಘ್ರವೇ ಪ್ರತಿ ಟನ್‌ ಕಬ್ಬಿಗೆ ₹3500 ದರ ನಿಗದಿ ಮಾಡಬೇಕೆಂದು ಆಗ್ರಹಿಸಿದರು. ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕೆಂದು ಕರೆ ನೀಡಿದರು.

ಇದೇ ವೇಳೆ ದೂರವಾಣಿ ಮೂಲಕ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರೈತರೊಂದಿಗೆ ಮಾತನಾಡಿ, ರೈತರ ಹೋರಾಟಕ್ಕೆಬೆಂಬಲ ಸೂಚಿಸುವುದಾಗಿ ಹೇಳಿದರು.

ಕಿತ್ತೂರು ಕರ್ನಾಟಕ ಸೇನೆ ಹಾಗೂ ಪುಣ್ಯಕೋಟಿ ಯುವಕ ಸಂಘ ಪದಾಧಿಕಾರಿಗಳು, ಕಾರ್ಯಕರ್ತರು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಕಿತ್ತೂರು ಕರ್ನಾಟಕ ಸೇನೆ ಹಾಗೂ ಪುಣ್ಯಕೋಟಿ ಯುವಕ ಸಂಘ ಪದಾಧಿಕಾರಿಗಳು, ಕಾರ್ಯಕರ್ತರು ಹೋರಾಟಕ್ಕೆ ಬೆಂಬಲ ಸೂಚಿಸಿದರು. ಗದ್ದಿಕರವಿನಕೊಪ್ಪದ ಸಚ್ಚಿದಾನಂದ ಅವಧೂತರು, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಕಲಾವಿದ ಸಿ.ಕೆ.ಮೆಕ್ಕೇದ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ನೇಗಿಲ ಯೋಗಿ ರೈತ ಸಂಘ ಜಿಲ್ಲಾ ಘಟಕದ ಧ್ಯಕ್ಷ ಶಂಕರ ಬೋಳಣ್ಣವರ, ಬಸನಗೌಡ ಪಾಟೀಲ, ಮಹಾಂತೇಶ ಮತ್ತಿಕೊಪ್ಪ, ಮಲ್ಲಿಕಾರ್ಜುನ ಹುಂಬಿ, ಬೀರಪ್ಪ ದೇಶನೂರ, ಮಹಾಂತೇಶ ಕಮತ, ಸುರೇಶ ಸಂಪಗಾಂವ, ಉದ್ಯಮಿ ಬಾಬುಸಾಬ ಸಂಗೊಳ್ಳಿ, ರಫೀಕ್ ಸಂಗೊಳ್ಳಿ, ಜಗದೀಶ ಬೂದಿಹಾಳ ಸೇರಿದಂತೆ ನೂರಾರು ರೈತರು, ರೈತ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಇದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?