Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟ್ಯಾಟೂನಿಂದ ಬರಲಿದೆ ಎಚ್​ಐವಿ, ಕ್ಯಾನ್ಸರ್ : ಕೇಂದ್ರಕ್ಕೆ ಈ ಬಗ್ಗೆ ಪತ್ರ , ಕಾನೂನು ಜಾರಿಗೆ ಚಿಂತನೆ ; ಗುಂಡೂರಾವ್

 

ಬೆಂಗಳೂರು: ಇಡ್ಲಿ ಬೇಯಿಸಲು ಉಪಯೋಗಿಸುವ ಪ್ಲಾಸ್ಟಿಕ್ ಹಾಳೆ ಬಳಕೆ ಆರೋಗ್ಯಕ್ಕೆ ಹಾನಿಕರ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟ ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಆಯುಕ್ತ ಶ್ರೀನಿವಾಸ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಇತ್ತೀಚಿಗೆ ಚರ್ಮ ಕ್ಯಾನ್ಸರ್, ಹೆಚ್​ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿಯಂತಹ ಮಾರಣಾಂತಿಕ ರೋಗಗಳು ಜನರಲ್ಲಿ ಹೆಚ್ಚಾಗುತ್ತಿವೆ. ಇವುಗಳಿಗೆ ಟ್ಯಾಟೂ ಹಾಕಿಸುವುದು ಕೂಡ ಒಂದು ಕಾರಣ ಎಂಬುದು ಆರೋಗ್ಯ ಇಲಾಖೆ ನಡೆಸಿರುವ ತಪಾಸಣೆಯಿಂದ ತಿಳಿದುಬಂದಿದೆ. ಟ್ಯಾಟೂವನ್ನು ಹಾಕುವಾಗ ಬಳಸುವ ಬಣ್ಣದಲ್ಲಿ ಅಪಾಯಕಾರಿ ಮೆಟಲ್ ಬಳಕೆಯಾಗುತ್ತಿರುವುದು ಕಂಡುಬಂದಿದೆ. ಇದು ಸಹ ಮನುಷ್ಯನ ದೇಹಕ್ಕೆ ಅಪಾಯಕಾರಿಯಾಗಿದೆ ಎಂದು ತಿಳಿಸಿದರು.

ಟ್ಯಾಟೂನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಸಾಧ್ಯತೆ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿಯಮ ರೂಪಿಸಲು ಅವಕಾಶ ಇದೆ. ಟ್ಯಾಟೂ ಇಂಕ್ ಅನ್ನು ಕಾಂತಿ ವರ್ಧಕಗಳ ಅಡಿಯಲ್ಲಿ ತರಲು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ನಂತರ ಟ್ಯಾಟೂ ಪಾರ್ಲರ್ ಗಳನ್ನು ನಿಯಂತ್ರಿಸಲು ಕಾನೂನು ರೂಪಿಸಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್‌ ತಿಳಿಸಿದರು.
ಜನವರಿಯಿಂದ ಒಟ್ಟು 3608 ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಲಾಗಿದೆ. ಈ ಪೈಕಿ 26 ಮಾದರಿಗಳು ಅಸುರಕ್ಷಿತವಾಗಿವೆ ಎಂಬುದು ತಿಳಿದುಬಂದಿದೆ. 28 ಕಳಪೆಯಾಗಿವೆ. ಇದೇ ಜನವರಿಯಲ್ಲಿ 681 ರಷ್ಟು ಇಡ್ಲಿ ಸ್ಯಾಂಪಲ್ಸ್ ಪಡೆಯಲಾಗಿದೆ. ಇಡ್ಲಿ ಮಾಡುವಾಗ ಪ್ಲಾಸ್ಟಿಕ್ ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಘಟನೆ ಸಂಬಂಧ 52 ಆಹಾರ ಉತ್ಪಾದಕರಿಗೆ ನೋಟಿಸ್ ನೀಡಲಾಗಿದೆ. ಪ್ಲಾಸ್ಟಿಕ್ ಬಳಕೆ ಮಾಡದಂತೆ ಈಗಾಗಲೇ ನಾವು ಎಚ್ಚರಿಕೆ ನೀಡಿದ್ದೇವೆ ಎಂದು ಅವರು ತಿಳಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?