Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

*ಮನೆ ಮನೆ ಸಮೀಕ್ಷೆ: ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ* *PUC ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ: ಸಿಎಂ* *ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ: ಅ19 ರೊಳಗೆ ಸಮೀಕ್ಷೆ ಮುಗಿಯುತ್ತದೆ* *ವಿಶೇಷ ಬೋಧನಾ ತರಗತಿಗಳ ಮೂಲಕ ಪಠ್ಯ ಪೂರ್ಣಗೊಳಿಸಲಿದ್ದಾರೆ ಶಿಕ್ಷಕರು* ಸಮೀಕ್ಷೆಯ ಸ್ಥಿತಿ ಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ವಿಡಿಯೊ ಕಾನ್ಷರೆನ್ಸ್

ಬೆಂಗಳೂರು : ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.

ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ.

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.

ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು‌.

ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲುಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ.

GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?