Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ಬೆಳಗಾವಿ : ಹುಕ್ಕೇರಿ ಪುರಸಭೆಗೆ ಎರಡನೇ ಅವಧಿಗೆ ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 9ನೇ ವಾರ್ಡ್‌ ಪದವಿ ಹೊಂದಿರುವ ಇಮ್ರಾನ್ ರಫಿಕ್ ಅಹ್ಮದ್‌ ಮೊಮೀನ್ ಅಧ್ಯಕ್ಷರಾಗಿ ಮತ್ತು 2ನೇ ವಾರ್ಡ್ ಜ್ಯೋತಿ ರಾಜೇಂದ್ರ ಬಡಿಗೇ‌ರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಎರಡೂ ಸ್ಥಾನಕ್ಕೂ ಒಂದೊಂದೆ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆಯಾಗಿದೆ ಎಂದು ಚುನಾವಣಾ ಅಧಿಕಾರಿಯೂ ಆದ ತಹಶೀಲ್ದಾರ್ ಮಂಜುಳಾ ನಾಯಕ್ ಫಲಿತಾಂಶ ಪ್ರಕಟಿಸಿದರು.

ಪಟ್ಟಣದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷ ಪುರಸಭೆಯ ಅಧಿಕಾರದ ಗದ್ದುಗೆ ಹಿಡಿದು ದಾಖಲೆ ಮಾಡಿತು.

23 ಸದಸ್ಯರನ್ನು ಒಳಗೊಂಡಿರುವ ಪುರಸಭೆಯಲ್ಲಿ 12 ಕಾಂಗ್ರೆಸ್ ಪಕ್ಷದ, 8 ಬಿಜೆಪಿಯ ಮತ್ತು 3 ಪಕ್ಷೇತರ ಸದಸ್ಯರು ಇದ್ದಾರೆ. ಬಿಜೆಪಿ ಈ ಬಾರಿಯೂ ಅಧಿಕಾರದ ಗದ್ದುಗೆ ಏರಲು ಪ್ರಯತ್ನ ಪಟ್ಟರೂ ವಿಫಲವಾಯಿತು. ಫಲಿತಾಂಶ ಹೊರಬಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಧ್ವಜ ಹಾರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ ಮಾತನಾಡಿ, ಮೊದಲ ಅವಧಿಗೆ ನಮ್ಮ ಪಕ್ಷಕ್ಕೆ ಬಹುಮತವಿದ್ದರೂ ಗೊಂದಲದ ವಾತಾವರಣದಿಂದ ಅಧಿಕಾರ ತಪ್ಪಿತ್ತು. ಆದರೆ ಈ ಬಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸರಿಯಾದ ಮಾರ್ಗದರ್ಶನ ನೀಡಿ ಸದಸ್ಯರೇ ಆಯ್ಕೆ ಮಾಡಲು ಅಧಿಕಾರ ನೀಡಿದ್ದರು. ಎಲ್ಲ ಕಾಂಗ್ರೆಸ್‌ ಸದಸ್ಯರು ಮತ್ತು ಪಕ್ಷೇತರರು ಸೇರಿ ಅವಿರೋಧ ಆಯ್ಕೆ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ