Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾನು ಕೋರೆ ಅವರನ್ನು ಪಕ್ಷಕ್ಕೆ ಕರೆದಿಲ್ಲ, ಅವರು ಬರೋದು ಇಲ್ಲ, ಸೌಹಾರ್ದ ಭೇಟಿ ಅಷ್ಟೇ: ಡಿಸಿಎಂ ಡಿ.ಕೆ.ಶಿವಕುಮಾರ್* *ಪ್ರಭಾಕರ್ ಕೋರೆ ಮನೆಯಲ್ಲಿ ರೊಟ್ಟಿ ಊಟ ಸವಿದ ಡಿಸಿಎಂ

ಬೆಳಗಾವಿ, ಜ.20:*“ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ ಸಹಕಾರ ನೀಡುತ್ತಾರೆ. ಗಾಂಧಿ ಭಾರತ ಕಾರ್ಯಕ್ರಮವಿರುವ ಕಾರಣ ಗಣ್ಯರು ಉಳಿದುಕೊಳ್ಳಲು ಅವರ ಶಿಕ್ಷಣ ಸಂಸ್ಥೆಗಳಿಂದ 170 ಕ್ಕೂ ಹೆಚ್ಚು ಕೊಠಡಿಗಳನ್ನು ನೀಡಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಂಸ್ಥೆಯಿಂದ ಬೇಕಾದ ಸಹಾಯ ಮಾಡುತ್ತಿದ್ದಾರೆ” ಎಂದು ಹೇಳಿದರು.

“ಈ ಕಾರಣಕ್ಕೆ ಅವರ ಮನೆಗೆ ಬಂದು ಸೌಹಾರ್ದಯುತ ಭೇಟಿ ನೀಡಿ, ಊಟ ಮಾಡಿದೆ. ಒಳ್ಳೆಯ ಜೋಳದ ರೊಟ್ಟಿ ಊಟ ನೀಡಿದ್ದಾರೆ. ಜೋಳವನ್ನು ತಿನ್ನುವವನು ಜಟ್ಟಿಯಂತೆ ಆಗುವನು ಎನ್ನುವ ಮಾತಿದೆ” ಎಂದರು.

“ಈ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕೋರೆ ಅವರ ಕುಟುಂಬ ದೊಡ್ಡ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಚಳುವಳಿಗೆ ಧನ ಸಹಾಯ ಮಾಡಿದೆ. ಪ್ರಭಾಕರ್ ಕೋರೆ ಅವರ ತಂದೆ ಸ್ವಾತಂತ್ರ್ಯ ಹೋರಾಟಗಾರರು” ಎಂದರು.

ಕೋರೆ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಸ್ಥಾನಗಳು ಸಿಗಲಿಲ್ಲ ಅಲ್ಲವೇ ಎನ್ನುವ ಪ್ರಶ್ನೆಗೆ, “ಈ ಪ್ರಶ್ನೆಯನ್ನು ಬಿಜೆಪಿಯವರ ಬಳಿ ಕೇಳಿ” ಎಂದರು.

*ಯತ್ನಾಳ್ ನ ಹುಚ್ಚಾಸ್ಪತ್ರೆಗೆ ಸೇರಿಸೋಣ*

ಮಹಾತ್ಮ ಗಾಂಧಿ ಅವರ ಹತ್ಯೆಯಲ್ಲಿ ನೆಹರೂ ಅವರ ಕೈವಾಡವಿತ್ತು ಎನ್ನುವ ಯತ್ನಾಳ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಎಂ.ಬಿ.ಪಾಟೀಲ್ ಅವರ ಆಸ್ಪತ್ರೆಗೆ ದಾಖಲಿಸಿಕೊಳ್ಳಿ ಎಂದು ಅವರಿಗೆ ಹೇಳುವೆ ಅಥವಾ ಹುಚ್ಚಾಸ್ಪತ್ರೆಗೆ ಸೇರಿಸಲು ಏರ್ಪಾಟು ಮಾಡೋಣ” ಎಂದು ಹೇಳಿದರು.

"ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರು 21 ರ ಬೆಳಿಗ್ಗೆ 10.30 ಕ್ಕೆ ಆಗಮಿಸಬಹುದು. ನೇರ ಸುವರ್ಣಸೌಧಕ್ಕೆ ಆಗಮಿಸುತ್ತಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !23 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್ ನೀಡಿದ ಹವಾಮಾನ ಇಲಾಖೆಕನಸು ಸಾಕಾರವಾಗುವ ಸಮಯ...ಈಗ KPCC ಯತ್ತ 2028 ಕ್ಕೆ ಸಿಎಂ ಆಗುತ್ತವತ್ತ ಮಾಸ್ಟರ್ ಪ್ಲ್ಯಾನ್ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ಪ್ರಮೋದ್ ಮಧ್ವರಾಜ್, ಎನ್.ಮಹೇಶ್‌, ರಘು ಕೌಟಿಲ್ಯ ಹೆಸರುನಾಳೆ ಸಿದ್ದರಾಮಯ್ಯ ರಾಜೀನಾಮೆ ?