Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಚಿವರು ಪರಸ್ಪರ ಭೇಟಿ ಮಾಡಿದರೆ ತಪ್ಪೇನು..? : ಸತೀಶ ಜಾರಕಿಹೊಳಿ

 

 

ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುವ ಸಚಿವರು ಪರಸ್ಪರ ಭೇಟಿಯಾಗುವ ಬಗ್ಗೆಯೂ ಅನು ಮಾನ ಪಡುವುದು ಸರಿಯಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ ಆಕ್ಷೇಪ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ವರು ಸಚಿವರು ಒಂದು ಕಡೆ ಸೇರುವುದು ಬೇಡವೇ ಎಂದು ಸಿಡಿಮಿಡಿಗೊಂಡರು. ನಿನ್ನೆ ಸಚಿವ ಸಂಪುಟ ಸಭೆಯ ಬಳಿಕ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಕಚೇರಿಯಲ್ಲಿ ಶಾಸಕರಾದ ಎಚ್.ಸಿ.ಮಹದೇವಪ್ಪ, ಕೆ.ಎನ್.ರಾಜಣ್ಣ ಮತ್ತು ತಾವು ಭೇಟಿಯಾಗಿರುವುದಕ್ಕೆ ನಾನಾ ರೀತಿಯ ವ್ಯಾಖ್ಯಾನಗಳನ್ನು ಮಾಡಲಾಗುತ್ತಿದೆ. ಅಲ್ಲಿ ವಾಲೀಕಿ ಪೀಠದ ಶ್ರೀಗಳು ಇದ್ದಿದ್ದನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶ್ರೀಗಳು ರಾಜಕೀಯಕ್ಕೆ ಬರುತ್ತೇವೆ ತೆಗೆದುಕೊಳ್ಳಿ ಎಂದರು ಎಂದು ಹೇಳುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಜಾರಕಿಹೊಳಿ, ಶ್ರೀಗಳು ಬರುವುದು ರಾಜಕೀಯ ಮಾಡಲಿಕ್ಕಾ?…. ರಾಜನಹಳ್ಳಿ ಜಾತ್ರೆಗೆ ಕರೆಯಲಿಕ್ಕೆ ಬಂದಿದ್ದರು. ಆ ವೇಳೆ ನಾವು, ಸಚಿವರು ಸೇರಿದ್ದೆವು. ಅದನ್ನು ಪ್ರಶ್ನೆ ಮಾಡಿದರೆ ಹೇಗೆ? ಎಂದು ತಿರುಗೇಟು ನೀಡಿದರು.

ಕುಂಭಮೇಳಕ್ಕೆ ಹೋಗಿರುವವರ ಬಗ್ಗೆ ಚರ್ಚೆಯಾಗಲಿ, ನಾನು ಹೋಗುತ್ತೇನೋ, ಇಲ್ಲವೋ ಅದು ಅನಗತ್ಯ. ಇಷ್ಟ ಇದ್ದವರು ಅಲ್ಲಿಗೆ ಭೇಟಿ ನೀಡುತ್ತಾರೆ. ಈಗಾಗಲೇ ಅಲ್ಲಿ ನಡೆದಿರುವ ದುರಂತದಲ್ಲಿ ಮೃತರಾಗಿರುವವರಿಗೆ ಪರಿಹಾರ ನೀಡುವ ಬಗ್ಗೆ ಜಿಲ್ಲಾಡಳಿತ ತನ್ನ ಅಧಿಕಾರದ ವ್ಯಾಪ್ತಿಯಲ್ಲಿ ಘೋಷಣೆ ಮಾಡಿದೆ. ಯಾವ ರೀತಿ ಪರಿಹಾರವನ್ನು ಕಲ್ಪಿಸಬೇಕೆಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಮೈಕ್ರೋ ಫೈನಾನ್ಸ್ ಹಾವಳಿಯನ್ನು ತಡೆಗಟ್ಟಲು ಶೀಘ್ರವೇ ಸುಗ್ರೀವಾಜ್ಞೆ ಜಾರಿಯಾಗಬೇಕು. ವಿಳಂಬವಾಗುತ್ತಿರುವುದಕ್ಕೆ ಕಾರಣ ಗೊತ್ತಿಲ್ಲ. ಕಾನೂನು ಜಾರಿಗೊಳಿಸುವ ಮೂಲಕ ಕಿರುಕುಳಕ್ಕೆ ಕಡಿವಾಣ ಹಾಕಬೇಕು ಎಂದು ಹೇಳಿದರು.

ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಹೆಚ್ಚು ಸಹಾಯವಾಗಬಹುದು ಎಂಬ ನಿರೀಕ್ಷೆಗಳಿತ್ತು. ಆದರೆ ಕಳೆದ 10 ವರ್ಷಗಳ ಬಜೆಟ್ ಅನ್ನು ನೋಡಿದ್ದೇವೆ. ಯಾವುದೇ ಲಾಭವಾಗಿಲ್ಲ. ದೇಶದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆಯಾಗಬೇಕು. ಅದರ ಗಾತ್ರ ದೊಡ್ಡದಿದ್ದರೆ ಸಾಲದು, ಜನರಿಗೂ ಲಾಭವಾಗಬೇಕು ಎಂದರು.

ಜಿಎಸ್ಟಿಯಲ್ಲಿ ರಾಜ್ಯದ ಪಾಲಿನ ವಿಚಾರವಾಗಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ಅದನ್ನು ಸರಿಪಡಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.ಮುಖ್ಯಮಂತ್ರಿ ಹುದ್ದೆ ಬಗ್ಗೆ ತಾವು ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಸಾಹಿತ್ಯ ಪರಿಷತ್ ಸರ್ಜರಿಗೆ ಹಾರ್ಟ್ ಸರ್ಜನ್ ಬೆಳಗಾವಿ ಮಣ್ಣಿನ ಮಗಳು ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ಸಜ್ಜು ಚುನಾವಣೆ ಸ್ಪರ್ಧೆಗೆ ನಿರ್ಧಾರ | ಗೆದ್ದರೆ ಪ್ರಥಮ ಅಧ್ಯಕ್ಷೆ, ತೋಂಟದಾರ್ಯ ಮಠದ ಜಗದ್ಗುರುಗಳು ಬೆಂಬಲಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕಸುಪ್ರೀಂ ಕೋರ್ಟಿನಲ್ಲಿರುವ ಗಡಿ ವಿವಾದ ಪ್ರಕರಣದ ತ್ವರಿತ ವಿಚಾರಣೆಗೆ ಮಹಾರಾಷ್ಟ್ರ ಸರಕಾರ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅಶೋಕ ಚಂದರಗಿ8 ಜನ ಮೊಬೈಲ್ ಕಳ್ಳರನ್ನು ಬಂಧಿಸಿದ ಕಟಕೋಳ ಪೊಲೀಸರು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿಯ ಬಂಧನಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?ವೈಶ್ಯ ಸಮಾಜದ ಏಕತೆ, ಪ್ರಗತಿಗೆ ಸೆ.6ರಂದು ಬೆಳಗಾವಿಯಲ್ಲಿ ವೈಶ್ಯ ಸಮ್ಮೇಳನ